KSPSTA letters About Various Subject Discus with CM and Education Minister
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಪ್ರಾಥಮಿಕ ಶಾಲಾ ಸಂಘದ ರಾಜ್ಯಾಧ್ಯಕ್ಷರಾದ ಶ್ರೀಯುತ ಕೆ. ನಾಗೇಶ್ ಅವರು ಹಾಗೂ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಯುತ ಚಂದ್ರಶೇಖರ್ ನುಗ್ಲಿ ಸಾಹೇಬರು, ಮತ್ತು ಸಂಘದ ಇತರೆ ಪ್ರಮುಖ ಸದಸ್ಯರು ಸೇರಿ ಕರ್ನಾಟಕದ ಮಾನ್ಯ ಮುಖ್ಯಮಂತ್ರಿಗಳ ಹತ್ತಿರ ರಾಜ್ಯ ಸರ್ಕಾರಿ ನೌಕರರ ವೇತನ ಆಯೋಗ, NPS ಮತ್ತು ವರ್ಗಾವಣೆಗೊಂಡ ಶಿಕ್ಷಕರನ್ನು ಬಿಡುಗಡೆ ಮಾಡುವ ಕುರಿತು ಚರ್ಚಿಸಿದರು.
ನಂತರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಸನ್ಮಾನ್ಯ ಶ್ರೀ ರಿತೇಶ್ ಕುಮಾರ್ ಸಿಂಗ್ ಅವರನ್ನು ಬೇಟಿ ಮಾಡಿ ಶಿಕ್ಷಕರ ಬಡ್ತಿ, ವೃಂದ ಮತ್ತು ನೇಮಕಾತಿ ನಿಯಮಗಳು ಮತ್ತು ಗ್ರಾಮೀಣ ಕೃಪಾಂಕ ಶಿಕ್ಷಕರ ಸಮಸ್ಯೆಗಳ ಕುರಿತು ಚರ್ಚೆ ಮಾಡಿದರು.
ನಂತರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವರಾದ ಮಾನ್ಯ ಶ್ರೀ ಮಧು ಬಂಗಾರಪ್ಪ ಅವರನ್ನು ಭೇಟಿ ಮಾಡಿ ಶಿಕ್ಷಕರ ವಿವಿಧ ಸಮಸ್ಯೆಗಳ ಕುರಿತು ಚರ್ಚೆ ಮಾಡಿದರು.
No comments:
Post a Comment