Information about internal reservations
ಒಳಮೀಸಲಾತಿ ಕುರಿತು ಗೃಹ ಸಚಿವರಾದ ಜಿ .ಪರಮೇಶ್ವರ ಅವರು ಇಂದು ನಡೆದ ಸಭೆಯಲ್ಲಿ ಚರ್ಚೆಯಾದ ವಿಷಯಗಳ ಕುರಿತು ಮಹತ್ವದ ಮಾಹಿತಿಯನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಡ್ಡಿದ್ದಾರೆ. ಆ ಮಾಹಿತಿ ಇಲ್ಲಿದೆ.
ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಕುರಿತಂತೆ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರ ನೇತೃತ್ವದಲ್ಲಿ ಕಾವೇರಿ ನಿವಾಸದಲ್ಲಿ ಸುದೀರ್ಘ ಸಭೆ ನಡೆಸಿ ಚರ್ಚಿಸಲಾಯಿತು.
ಬಳಿಕ ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ಹಿರಿಯ ಸಚಿವರಾದ K.H Muniyappa DR HC Mahadevappa Shivaraj Tangadagi ಆರ್.ಬಿ.ತಿಮ್ಮಾಪುರ ಅವರೊಂದಿಗೆ ಪ್ರತಿಕಾಗೋಷ್ಟಿ ನಡೆಸಲಾಯಿತು. ಪತ್ರಿಕಾಗೋಷ್ಟಿಯ ಪ್ರಮುಖ ಅಂಶಗಳು.
ನಮ್ಮ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿಗೊಳಿಸುವುದಾಗಿ ಹೇಳಿದೆ. ಒಳ ಮೀಸಲಾತಿ ಜಾರಿಗೊಳಿಸಲು ನಮ್ಮ ಸರ್ಕಾರ ಬದ್ಧವಾಗಿದೆ.
ಈ ಕುರಿತಂತೆ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯು ಒಂದು ವಾರದೊಳಗೆ ಮಧ್ಯಂತರ ವರದಿ ಸಲ್ಲಿಸುವುದಾಗಿ ತಿಳಿಸಿದೆ. ತದನಂತರ ಮುಖ್ಯಮಂತ್ರಿಯವರು ಚರ್ಚಿಸಿ ಶೀಘ್ರದಲ್ಲಿ ಕ್ರಮ ಕೈಗೊಳ್ಳಲಿದ್ದಾರೆ. ಎಂಪೆರಿಕಲ್ ಡೇಟಾ ನಿರ್ಧಿಷ್ಟವಾದ ಅಭಿಪ್ರಾಯ ಬರುತ್ತದೆ ಎಂದು ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು ಇಂದಿನ ಸಭೆಯಲ್ಲಿ ತಿಳಿಸಿದ್ದಾರೆ.
No comments:
Post a Comment