M. Govinda Pai Birth Anniversary
*ಮಾರ್ಚ್ 23-ಎಮ್.ಗೋವಿಂದ ಪೈ ಅವರ ಜನ್ಮದಿನದ ಸ್ಮರಣೆಯಂದು ಗೌರವಪೂರ್ವಕ ನಮನಗಳು:*
ಕರ್ನಾಟಕದ ಪ್ರಪ್ರಥಮ "ರಾಷ್ಟ್ರಕವಿ"ಗಳಾಗಿ ಪ್ರಸಿದ್ಧರಾಗಿದ್ದಾರೆ. ಕೇರಳದ ಮಂಜೇಶ್ವರಕ್ಕೆ ಭಾರತದ ಸಾಂಸ್ಕೃತಕ ಭೂಪಟದಲ್ಲಿ ಸ್ಥಾನ ಒದಗಿಸಿಕೊಟ್ಟವರು ಗೋವಿಂದ ಪೈ.೧೯೫೬ರಲ್ಲಿ ರಾಜ್ಯ ಪುನರ್‌ವಿಂಗಡಣೆಯಾದಾಗ ಕಾಸರಗೊಡು ಕೇರಳದ ಪಾಲಾಯಿತು. ಆಗ ಅವರು ಬಹಳ ಹಳಹಳಿಸಿದರು. ಗೋವಿಂದ ಪೈಗಳು ಕೊನೆಯ ತನಕ ತಮ್ಮ ಹೆಸರಿನೊಂದಿಗೆ ಮಂಜೇಶ್ವರ ವನ್ನು ಜೊತೆಗೂಡಿಸಿಕೊಂಡಿದ್ದರು.
ಎಂ. ಗೋವಿಂದ ಪೈ ಅವರು ಮಂಗಳೂರಿನ ಸಾಹುಕಾರ ತಿಮ್ಮಪ್ಪ ಪೈಗಳು ಮತ್ತು ತಾಯಿ ದೇವಕಿಯಮ್ಮ. ತಾಯಿಯ ತೌರುಮನೆ ಮಂಜೇಶ್ವರ. ಅವರು ಕಾಸರಗೋಡು ತಾಲೂಕಿನ ಮಂಜೇಶ್ವರದ ಅಜ್ಜನ ಮನೆಯಲ್ಲಿ ಮಾರ್ಚ್ ೨೩, ೧೮೮೩ ರಂದು ಜನಿಸಿದರು.ಅವರ ತಂದೆ ತುಂಬ ಸ್ಥಿತಿವಂತರು ತಿಮ್ಮಪ್ಪ ಪೈ ಅವರ ಹಿರಿಯ ಮಗ. ಇವರಿಗೆ ಮೂವರು ತಮ್ಮಂದಿರು ಮತ್ತು ಮೂವರು ಸಹೋದರಿಯರಿರು. ಶ್ರೀಮಂತ ಮನೆತನದಲ್ಲಿ ಹುಟ್ಟಿದ ಎಂ. ಗೋವಿಂದ ಪೈಗಳ ಪ್ರಾಥಮಿಕ ಶಿಕ್ಷಣ ಮಂಗಳೂರುನಲ್ಲಿಯೇ ಆಯಿತು. ಪದವಿ ಪೂರ್ವದ ವಿದ್ಯಾಭ್ಯಾಸ ಮಂಗಳೂರಿನ ಸರಕಾರಿ ಕಾಲೇಜಿನಲ್ಲಿ ನಡೆಯಿತು. ಅವರ ಒಡನಾಡಿಗಳಲ್ಲಿ ಎಂ. ಎನ್. ಕಾಮತ್ ಒಬ್ಬರು. ಅವರಿಗೆ ಪಾಠ ಕಲಿಸಿದ ಗುರುವರ್ಯರಲ್ಲಿ ಪಂಜೆ ಮಂಗೇಶರಾಯರೂ ಒಬ್ಬರು.
#ಗೌರವ ಪುರಸ್ಕಾರಗಳು:
@ಕನ್ನಡದ ಪ್ರಥಮ ರಾಷ್ಟ್ರಕವಿ:
೧೯೪೯ರಲ್ಲಿ ಮದರಾಸು ಸರಕಾರವು (೧೯೫೬ರಲ್ಲಿ ಕರ್ನಾಟಕ ಏಕೀಕರಣಕ್ಕಿಂತ ಮೊದಲು ದಕ್ಷಿಣ ಕನ್ನಡ ಜಿಲ್ಲೆಯು ಆಗಿನ ಮದರಾಸು ರಾಜ್ಯದಲ್ಲಿ ಅಂದರೆ ಈಗಿನ ತಮಿಳುನಾಡಿನಲ್ಲಿದ್ದಿತು.) ಗೋವಿಂದ ಪೈಗಳಿಗೆ ರಾಷ್ಟ್ರ ಕವಿ ಎಂದು ಸನ್ಮಾನ ನೀಡಿ ಗೌರವಿಸಿತು.
ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ- ೧೯೫೦ರಲ್ಲಿ ಮುಂಬಯಿಯಲ್ಲಿ ಜರುಗಿದ ೩೪ನೆಯ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಗೋವಿಂದ ಪೈಗಳು ಅಧ್ಯಕ್ಷರಾಗಿದ್ದರು.
#ಸೆಪ್ಟೆಂಬರ್ 06,1963 ರಂದು ಗೋವಿಂದ ಪೈಯವರು ನಿಧನರಾದರು.
No comments:
Post a Comment