MDRS KREIS Online Application Last Date Extended
ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಿಗೆ 2025-26ನೇ ಸಾಲಿನಲ್ಲಿ 6 ನೇ ತರಗತಿ ಪ್ರವೇಶ ಸಂಬಂಧ ಸೇವಾ ಸಿಂಧು ಪೋರ್ಟಲ್ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸುವ ಕುರಿತು.
★★
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು, ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳು ಹಾಗೂ ಡಾ|| ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳಲ್ಲಿ 2025-26ನೇ ಸಾಲಿನ 6 ನೇತರಗತಿ ಪ್ರವೇಶ ಪ್ರಕ್ರಿಯೆಯನ್ನು ಸೇವಾ ಸಿಂಧು ಪೋರ್ಟಲ್ ತಂತ್ರಾಂಶದ ಮೂಲಕ ಪ್ರಾರಂಭಿಸಲಾಗಿದ್ದು, ಅದರಂತೆ ಸೇವಾ ಸಿಂಧು ಪೋರ್ಟಲ್ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ Admission for Morarji Desai Residential Schools ಸೇವೆಯ ವೆಬ್ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳಿಗೆ ನಿರ್ದೇಶನಾಲಯದ ವತಿಯಿಂದ ಪ್ರವೇಶಾತಿ ಅಧಿಸೂಚನೆ ಹೊರಡಿಸಲಾಗಿದ್ದು, ಈ ಕೆಳಕಂಡ ದಿನಾಂಕಗಳನ್ನು ತಿಳಿಸಲಾಗಿತ್ತು.
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 31.01.2025
ಅರ್ಜಿ ಸಲ್ಲಿಸಲು ವಿಸ್ತರಿಸಲಾದ ಕೊನೆಯ ದಿನಾಂಕ : 25.03.2025.
ಪ್ರಸ್ತುತ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ದಿನಾಂಕ:10.04.2025 ಕ್ಕೆ ವಿಸ್ತರಿಸಲಾಗಿದ್ದು, ಸಂಬಂಧಪಟ್ಟ ಜಿಲ್ಲಾ ಅಧಿಕಾರಿಗಳು ಈ ಸಂಬಂಧ ಸೂಕ್ತ ಕ್ರಮಕೈಗೊಳ್ಳುವಂತೆ ಸಂಬಂಧಪಟ್ಟ ಪ್ರಾಂಶುಪಾಲರುಗಳಿಗೆ/ಸಿಬ್ಬಂದಿಗಳಿಗೆ ಮಾರ್ಗದರ್ಶನ ನೀಡಲು ಸೂಚಿಸಿದೆ. ಯಾವುದೇ ಕಾರಣಕ್ಕೂ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಮುಂದೂಡಲಾಗುವುದಿಲ್ಲ.
ಅಧಿಕೃತ ಆದೇಶ ಡೌನ್ಲೋಡ್ ಮಾಡಿಕೊಳ್ಳಿ.
No comments:
Post a Comment