Regarding suspension of issuance of fresh notifications of posts for recruitment in State Civil Services
ರಾಜ್ಯ సివిలా ಸೇವೆಗಳಲ್ಲಿನ ನೇಮಕಾತಿಗಾಗಿ ಹುದ್ದೆಗಳ ಹೊಸದಾಗಿ ಅಧಿಸೂಚನೆ ಹೊರಡಿಸುವುದನ್ನು ತಡೆಹಿಡಿಯುವ ಬಗ್ಗೆ ರಾಜ್ಯ ಸರ್ಕಾರದ ಸುತ್ತೋಲೆ ಪ್ರಕಟ.
ಸುತ್ತೋಲೆಯಲ್ಲಿ ಏನಿದೆ ಎಂಬುದನ್ನು ಈ ಕೆಳಗೆ ಇದೆ.
ಉಲ್ಲೇಖ: ಸಮ ಸಂಖ್ಯೆಯ ಸುತ್ತೋಲೆ ದಿನಾಂಕ:25.11.2024.
ಉಲ್ಲೇಖಿತ ದಿನಾಂಕ:25.11.2024 ಸುತ್ತೋಲೆಯಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ಜಾರಿಗೆ ತಕ್ಷಣದಿಂದ ಹೊರಡಿಸಬಾರದೆಂದು ಸೂಚಿಸಲಾಗಿದೆ. ಬರುವಂತೆ ಮುಂದಿನ ಆದೇಶದವರೆಗೂ
ಆದಾಗ್ಯೂ ಕೆಲವು ನೇಮಕಾತಿ ಪ್ರಾಧಿಕಾರಗಳು ಈ ಸೂಚನೆಗಳನ್ನು ಉಲ್ಲಂಘಿಸಿ ನೇರ ನೇಮಕಾತಿ ಮಾಡಲು ಹೊಸ ಅಧಿಸೂಚನೆಗಳನ್ನು ಹೊರಡಿಸಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ.
ಈ ಹಿನ್ನೆಲೆಯಲ್ಲಿ ದಿನಾಂಕ:25.11.2024ರ ನಂತರ ನೇರ ನೇಮಕಾತಿಗಾಗಿ ಯಾವುದೇ ಹೊಸ ಅಧಿಸೂಚನೆಗಳನ್ನು ಹೊರಡಿಸಿದ್ದಲ್ಲಿ ಈ ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಲು ಆಯಾಯ ನೇಮಕಾತಿ ಪ್ರಾಧಿಕಾರಗಳಿಗೆ ಈ ಮೂಲಕ ಸೂಚಿಸಿದೆ.
ಮುಂದುವರೆದು, ದಿನಾಂಕ:25.11.2024ರ ಸುತ್ತೋಲೆಯನ್ನು ಉಲ್ಲಂಘಿಸುವ ಎಲ್ಲಾ ನೇಮಕಾತಿ ಪ್ರಾಧಿಕಾರಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಆಯಾಯ ಆಡಳಿತ ಇಲಾಖೆಯ ಕಾರ್ಯದರ್ಶಿಗಳಿಗೆ ಈ ಮೂಲಕ ಸೂಚಿಸಲಾಗಿದೆ.
ಈ ನಿರ್ದೇಶನವನ್ನು ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು ಎಂದು ಸಿಬ್ಬಂದಿ ಆಡಳಿತ ಸುಧಾರಣಾ ಇಲಾಖೆ ತಿಳಿಸಿದೆ.
No comments:
Post a Comment