08-04-2025 Tuesday All News Papers Educational, Employment and Others News Points (Educational and Informational Purpose Only)
ಇಂದಿನ ಆಧುನಿಕ ಯುಗದಲ್ಲಿ ಸಮಾಚಾರ ಪತ್ರಿಕೆಗಳು ಮಹತ್ತರ ಪಾತ್ರವನ್ನು ವಹಿಸುತ್ತವೆ. ನವೀನ ತಂತ್ರಜ್ಞಾನದ ಮೂಲಕ ಸಮಾಚಾರ ಪತ್ರಿಕೆಗಳು ಓದುಗರಿಗೆ ಒಳ್ಳೆಯ ಮಾಹಿತಿಗಳನ್ನು ಒದಗಿಸುವ ಭಂಡಾರಗಳಾಗಿ ದಿನ ಪತ್ರಿಕೆಗಳು ಕಾರ್ಯನಿರ್ವಹಣೆ ಮಾಡುತ್ತಿವೆ. ಸಮಾಚಾರ ಪತ್ರಿಕೆಗಳು ಮಾನವನ ಅವಿಭಾಜ್ಯ ಅಂಗವಾಗಿ ಕೆಲಸ ನಿರ್ವಹಣೆ ಮಾಡುತ್ತಿವೆ.
ಸಮಾಚಾರ ಪತ್ರಿಕೆಗಳು
ಹರಿದು ಹಂಚಿ ಹೋದ ಕನ್ನಡ ನಾಡು ಏಕೀಕರಣಗೊಳ್ಳಲು ಸಮಾಚಾರ ಪತ್ರಿಕೆಗಳು ಪ್ರಮುಖ ಪಾತ್ರ ವಹಿಸಿವೆ.
ಕರ್ನಾಟಕದಲ್ಲಿ ಕನ್ನಡ ಪತ್ರಿಕೆಗಳು ಜನ್ಮ ತಳೆದದ್ದು ರಾಜಕೀಯ ಮತ್ತು ಜನರಿಗೆ ಸಾಮಾಜಿಕ ಜಾಗೃತಿಯ ಉದ್ದೇಶದಿಂದ . ೧೯೩೩ನೆಯ ಇಸವಿಯಲ್ಲಿ ಬೆಳಗಾವಿಯಲ್ಲಿ ಪ್ರಾರಂಭವಾದ ಸಂಯುಕ್ತ ಕರ್ನಾಟಕ ಪತ್ರಿಕೆಯು, ಹೆಸರೇ ಸೂಚಿಸುವಂತೆ, ಕರ್ನಾಟಕ ಏಕೀಕರಣಕ್ಕಾಗಿ, ರಾಷ್ಟ್ರೀಯ ಸ್ವಾತಂತ್ರ್ಯ ಚಳುವಳಿಗಾಗಿ ಹಾಗೂ ಸಮಾಜ ಸುಧಾರಣೆಗಾಗಿ ದುಡಿದಿದೆ. ತಾಯಿನಾಡು ಹಾಗೂ ಪ್ರಜಾವಾಣಿ ಪತ್ರಿಕೆಗಳು ಈ ಕಾರ್ಯವನ್ನು ಮೈಸೂರು ಪ್ರಾಂತದಲ್ಲಿ ಮಾಡಿದವು. ಈ ಪತ್ರಿಕೆಗಳು ನಾಡು ಕಟ್ಟಲು ದುಡಿದಂತೆ, ನುಡಿಯನ್ನು ಬೆಳೆಸಲೂ ದುಡಿದವು. ಅಲ್ಲಿಂದ ಇಲ್ಲಿಯವರೆಗೆ ಕನ್ನಡ ಪತ್ರಿಕೆಗಳಲ್ಲಿ ಸಾಕಷ್ಟು ಬದಲಾವಣೆಗಳಾಗಿವ. ಕೆಲವೊಂದು ಬದಲಾವಣೆಗಳು ಹೆಮ್ಮೆ ಪಡುವಂತಹವು ; ಕೆಲವೊಂದು ದುಃಖ ಪಡುವಂತಹವು.
ಒಂದು ಪತ್ರಿಕೆಗೆ ‘ತನ್ನತನ’ ಎನ್ನುವದು ಬೇಕು. ಪಾ.ವೆಂ. ಆಚಾರ್ಯರು ‘ಸಂಯುಕ್ತ ಕರ್ನಾಟಕ’ದ ಸಂಪಾದಕ ಮಂಡಲಿಯಲ್ಲಿದ್ದ ಕಾಲವದು. ಆ ಸಮಯದಲ್ಲಿ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ರಂಗೇರಿತ್ತು. ಮರಾಠಿ ಪತ್ರಿಕೆಗಳು ಭಂಡಶೈಲಿಯಲ್ಲಿ ಸುದ್ದಿಯನ್ನು ಪ್ರಕಟಿಸುತ್ತಿದ್ದವು. ನಾನು ಪಾ.ವೆಂ. ಅವರನ್ನು ಪತ್ರಿಕೆಯ ಕಚೇರಿಯಲ್ಲಿ ಭೆಟ್ಟಿಯಾದಾಗ, ಈ ವಿಷಯವನ್ನು ಪ್ರಸ್ತಾಪಿಸಿ, “ಸಂಯುಕ್ತ ಕರ್ನಾಟಕವು ಸಭ್ಯವಾಗಿ ಬರೆಯುವದೇಕೆ?”ಎಂದು ಕೇಳಿದ್ದೆ. ಪಾ.ವೆಂ. ನಸುನಕ್ಕು ಹೇಳಿದರು: “ಸಂಯುಕ್ತ ಕರ್ನಾಟಕಕ್ಕೆ ದೀರ್ಘವಾದ ಒಂದು ಸತ್ಸಂಪ್ರದಾಯವಿದೆ !”
ಆ ಸತ್ಸಂಪ್ರದಾಯ ಇಂದು ಎತ್ತ ಹೋಗಿದೆಯೋ ಅಥವಾ ಸತ್ತೇ ಹೋಗಿದೆಯೋ ತಿಳಿಯದು ! ಸಂಯುಕ್ತ ಕರ್ನಾಟಕದ ಭಾಷೆ, ಕಾಗುಣಿತಗಳ ತಪ್ಪು ಹಾಗು ವರದಿಯ ಶೈಲಿಯನ್ನು ನೋಡಿದಾಗ, ಈ ಪತ್ರಿಕೆಗೆ ಇಂದು ಕೋಡಂಗಿಯ ವ್ಯಕ್ತಿತ್ವ ಬಂದಿದೆ ಎಂದು ಭಾಸವಾಗುವದು.
No comments:
Post a Comment