Gram Panchayat By-Election Regarding holding by-elections for the vacant/vacant member seats in Gram Panchayats due to various reasons.
ಗ್ರಾಮ ಪಂಚಾಯತಿ ಉಪಚುನಾವಣೆ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ / ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆಯನ್ನು ನಡೆಸುವ ಕುರಿತು ಸರ್ಕಾರ ರಾಜ್ಯಪತ್ರ ಹೊರಡಿಸಿದೆ. ಆ ರಾಜ್ಯಪತ್ರದಲ್ಲಿ ಏನಿದೆ, ಉಪ ಚುನಾವಣೆ ವೇಳಾಪಟ್ಟಿ ಸಂಪೂರ್ಣ ಮಾಹಿತಿಗಾಗಿ ಈ ಮಾಹಿತಿ ಓದಿ.
ಭಾರತ ಸಂವಿಧಾನ ಅನುಚ್ಚೇದ 243K ಹಾಗೂ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪ್ರಕರಣ 308ರಲ್ಲಿ ದತ್ತವಾಗಿರುವ ಅಧಿಕಾರದ ಮೇರೆಗೆ, ರಾಜ್ಯ ಚುನಾವಣಾ ಆಯೋಗವು ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ / ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆಯನ್ನು ನಡೆಸಲು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪ್ರಕರಣ 308ಎಎ ಮತ್ತು 308ಎಬಿ ಮತ್ತು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಚುನಾವಣೆ ನಡೆಸುವ) ನಿಯಮಗಳು 1993ರ ನಿಯಮ 12ರನ್ವಯ ಚುನಾವಣಾ ವೇಳಾಪಟ್ಟಿಯನ್ನು ಈ ಕೆಳಕಂಡಂತೆ ಘೋಷಿಸಿದೆ.
ವಿವಿಧ ಕಾರಣಗಳಿಂದ ಖಾಲಿ ಇರುವ ತೆರವಾಗಿರುವ ಉಪ ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿಗಳ ಸದಸ್ಯ ಸ್ಥಾನಗಳ ಸಂಖ್ಯಾ ವಿವರಗಳನ್ನು ಲಗತ್ತಿಸಿರುವ ಅನುಬಂಧ ದಲ್ಲಿ ತೋರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ.
No comments:
Post a Comment