KSPSTA

RECENT INFORMATIONS

Search This Blog

Sunday, April 6, 2025

Instructions not to use students to maintain the cleanliness of toilets in all government Schools

  Dailyguru       Sunday, April 6, 2025
Instructions not to use students to maintain the cleanliness of toilets in all government primary and secondary schools in the state


ವಿಷಯ:-ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಶೌಚಾಲಯಗಳ ಸ್ವಚ್ಛತೆಯನ್ನು ನಿರ್ವಹಿಸಲು ವಿದ್ಯಾರ್ಥಿಗಳನ್ನು ಬಳಸದಿರುವ ಕುರಿತು ಸೂಚನೆಗಳ ಸುತ್ತೋಲೆ.

ಸರ್ಕಾರ ಹೊರಡಿಸಿದ ಸುತ್ತೋಲೆಯಲ್ಲಿ ಯಾವ ಯಾವ ಸೂಚನೆಗಳೂ ಇವೆ ನೋಡಿ.

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಇತ್ತೀಚೆಗೆ ಶಾಲಾ ಮುಖ್ಯ ಶಿಕ್ಷಕರು, ಶಿಕ್ಷಕರು ಶೌಚಾಲಯಗಳನ್ನು ವಿದ್ಯಾರ್ಥಿಗಳಿಂದ ಸ್ವಚ್ಛತೆ ಮಾಡಿಸುತ್ತಿರುವ ಕುರಿತಾದ ಘಟನೆಗಳು ಸರ್ಕಾರದ ಮತ್ತು ಇಲಾಖೆಯ ಗಮನಕ್ಕೆ ಬಂದಿರುತ್ತದೆ. ಶಾಲೆಗಳಲ್ಲಿ ವಿದ್ಯಾರ್ಥಿಗಳನ್ನು ಶೈಕ್ಷಣಿಕ ಚಟುವಟಿಕೆಗಳಲ್ಲಿ, ಸಹ ಪಠ್ಯ ಚಟುವಟಿಕೆಗಳಲ್ಲಿ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಮಾತ್ರ ತೊಡಗಿಸಿಕೊಳ್ಳಬೇಕಾಗುತ್ತದೆ. ವಿದ್ಯಾರ್ಥಿಗಳನ್ನು ಶೌಚಾಲಯಗಳ ಸ್ವಚ್ಛತೆಯಂತಹ ಕಾರ್ಯಗಳಿಂದ ದೂರವಿರಿಸುವುದು ಅಧಿಕಾರಿಗಳ, ಮುಖ್ಯ ಶಿಕ್ಷಕರ, ಶಿಕ್ಷಕರ, ಸಿಬ್ಬಂದಿಗಳ ಕರ್ತವ್ಯವಾಗಿರುತ್ತದೆ. ಆದರೆ ಅವರುಗಳು ಈ ಹೊಣೆಗಾರಿಕೆಯನ್ನು ಮರೆತು ವಿದ್ಯಾರ್ಥಿಗಳನ್ನು ಶಾಲೆಗಳಲ್ಲಿ ಶೌಚಾಲಯಗಳ ಸ್ವಚ್ಛತೆಯಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಆಕ್ಷೇಪಣೀಯ ಮತ್ತು ಖಂಡನೀಯ. ಇಂತಹ ಘಟನೆಗಳನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನಲೆಯಲ್ಲಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ ಶೌಚಾಲಯಗಳ ಸ್ವಚ್ಛತೆಯನ್ನು ನಿರ್ವಹಿಸುವ ಕುರಿತು ಕೆಳಕಂಡ ಅಂಶಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸಂಬಂಧಿಸಿದ ಎಲ್ಲರಿಗೂ ತಿಳಿಸಲಾಗಿದೆ.

1. ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಶೌಚಾಲಯಗಳ ಸ್ವಚ್ಛತಾ ಕಾರ್ಯ ಮತ್ತು ನಿರ್ವಹಣೆಯನ್ನು ಯಾವುದೇ ಕಾರಣಕ್ಕೂ, ಯಾವುದೇ ಸಂದರ್ಭದಲ್ಲಿಯೂ ಸಹ ವಿದ್ಯಾರ್ಥಿಗಳಿಂದ ಕೈಗೊಳ್ಳುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.

2. ಉಲ್ಲೇಖಿತ ಸುತ್ತೋಲೆಯ ಅನುಸಾರ ಶಾಲಾ ನಿರ್ವಹಣಾ ಅನುದಾನವನ್ನು ಆಯಾ ಸರ್ಕಾರಿ ಶಾಲೆಗಳಿಗೆ ಪ್ರಸ್ತುತ ಸಾಲಿಗೆ ಈಗಾಗಲೇ ಬಿಡುಗಡೆ ಮಾಡಲಾಗಿದೆ. ಸದರಿ ಅನುದಾನವನ್ನು ಪ್ರಥಮ ಪ್ರಾಶಸ್ತ್ರದಲ್ಲಿ ಶೌಚಾಲಯಗಳ ಸ್ವಚ್ಛತಾ ಕಾರ್ಯಗಳಿಗೆ ಬಳಸಿಕೊಂಡು ಆಯಾ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (ಎಸ್.ಡಿ.ಎಂ.ಸಿ) ಗಳ ಸಹಕಾರದೊಂದಿಗೆ, ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಶೌಚಾಲಯಗಳ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳತಕ್ಕದ್ದು,

30/12

3. ಒಂದು ವೇಳೆ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಾಲಾ ಮುಖ್ಯ ಶಿಕ್ಷಕರು, ಶಿಕ್ಷಕರು ಮತ್ತು ಸಿಬ್ಬಂದಿಗಳಾಗಲಿ ವಿದ್ಯಾರ್ಥಿಗಳನ್ನು ಶಾಲಾ ಶೌಚಾಲಯಗಳ ಸ್ವಚ್ಛತೆಗಾಗಿ ಬಳಸಿಕೊಂಡಲ್ಲಿ ಅಂತಹವರ ಮೇಲೆ ಇಲಾಖಾ ವತಿಯಿಂದ ನಿಯಮಾನುಸಾರ ಶಿಸ್ತು ಕ್ರಮಗಳನ್ನು ಜರುಗಿಸಲಾಗುವುದು ಹಾಗೂ ಪ್ರಥಮ ವರ್ತಮಾನ ವರದಿ (FIR) ದಾಖಲಿಸಲಾಗುವುದು ಎಂದು ಎಚ್ಚರಿಸಲಾಗಿದೆ.

Dad

4. ಆಯಾ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (ಎಸ್.ಡಿ.ಎಂ.ಸಿ)ಗಳು ವಿದ್ಯಾರ್ಥಿಗಳಿಗೆ ಈ ಕುರಿತು ಅರಿವು ಮೂಡಿಸತಕ್ಕದ್ದು ಹಾಗೂ ಯಾವುದೇ ವಿದ್ಯಾರ್ಥಿಗಳು ಶಾಲಾ ಶೌಚಾಲಯಗಳ ಸ್ವಚ್ಛತೆಯಲ್ಲಿ ತೊಡಗಿಸಿಕೊಂಡಿರುವುದಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಬಹುದಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಪಿಡಿಎಫ್ ಡೌನ್ಲೋಡ್ ಮಾಡಿಕೊಳ್ಳಿ.
logoblog

Thanks for reading Instructions not to use students to maintain the cleanliness of toilets in all government Schools

Previous
« Prev Post

No comments:

Post a Comment