KLC Provisional Results link 2025
ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿನ ಖಾಲಿ ಹುದ್ದೆಗಳಿಗೆ ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಗಳ ಅಂತಿಮ ಕೀ ಉತ್ತರಗಳನ್ನು ಮತ್ತು ತಾತ್ಕಾಲಿಕ ಅಂಕಪಟ್ಟಿಯನ್ನು ಪ್ರಕಟಿಸುವ ಬಗ್ಗೆ.
ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿನ ಖಾಲಿ ಇರುವ ವಿವಿಧ ವೃಂದದ ಹುದ್ದೆಗಳಿಗೆ ದಿನಾಂಕ:22-03-2025 ರಿಂದ 25-03-2025ರ ವರೆಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಾಗಿದ್ದು, ಸದರಿ ಪರೀಕ್ಷೆಗಳ ತಾತ್ಕಾಲಿಕ ಕೀ ಉತ್ತರಗಳನ್ನು ದಿನಾಂಕ: 25-03-2025 ರಂದು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಿ ಸದರಿ ಕೀ ಉತ್ತರಗಳಿಗೆ ಆಕ್ಷೇಪಣೆಗಳಿದ್ದಲ್ಲಿ, ದಿನಾಂಕ: 28-03-2025ರ ಸಂಜೆ 5.00 ಗಂಟೆಯೊಳಗೆ ಸಲ್ಲಿಸಲು ಅವಕಾಶ ನೀಡಲಾಗಿತ್ತು.
ಪ್ರಕಟಿತ ಕೀ ಉತ್ತರಗಳಿಗೆ ಅಭ್ಯರ್ಥಿಗಳಿಂದ ಸ್ವೀಕೃತವಾದ ಆಕ್ಷೇಪಣೆಗಳನ್ನು ವಿಷಯ ತಜ್ಞರ ಸಮಿತಿಯ ಮೂಲಕ ಪರಿಶೀಲಿಸಿ, ವಿಷಯ ತಜ್ಞರ ಶಿಫಾರಸ್ಸಿನಂತೆ ಅಂತಿಮ ಕೀ ಉತ್ತರಗಳನ್ನು ದಿನಾಂಕ: 09-04-2025 ರಂದು ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.
ಅಂತಿಮ ಕೀ ಉತ್ತರಗಳನ್ವಯ ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಗಳಿಸಿದ ತಾತ್ಕಾಲಿಕ ಅಂಕಪಟ್ಟಿಯನ್ನು ಮತ್ತು ಅಂತಿಮ ಕೀ ಉತ್ತರಗಳನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದ್ದು, ಸದರಿ ತಾತ್ಕಾಲಿಕ ಅಂಕಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಒದಗಿಸಲಾದ ಲಿಂಕ್ ಮೂಲಕ ದಿನಾಂಕ: 12-04-2025 ರ ಸಂಜೆ 5.00 ರೊಳಗೆ ಪೂರಕ ದಾಖಲೆಗಳೊಂದಿಗೆ ಆಕ್ಷೇಪಣೆ ಸಲ್ಲಿಸಬಹುದಾಗಿದೆ. ಕೀ ಉತ್ತರಗಳಿಗೆ ಸಂಬಂಧಿಸಿದ ಅಥವಾ ಪೂರಕ ದಾಖಲೆಗಳಿಲ್ಲದೆ ಸಲ್ಲಿಸಲಾಗುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ.
ಫಲಿತಾಂಶ ಚೆಕ್ ಮಾಡಲು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ.
No comments:
Post a Comment