Regarding Academic Sessions and Vacation Periods for the 2025-26 Academic Year
ರಾಜ್ಯದಲ್ಲಿ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ,ಪ್ರೌಢ ಶಾಲೆಗಳಿಗೆ 2025-26 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಶೈಕ್ಷಣಿಕ ಅವಧಿಗಳು ಮತ್ತು ರಜಾ ಅವಧಿಗಳನ್ನು ನಿಗದಿಪಡಿಸುವ ಬಗ್ಗೆ.
ಉಲ್ಲೇಖ : 01.ಈ ಕಛೇರಿ ಸುತ್ತೋಲೆ ಪತ್ರ ಸಂಖ್ಯೆ:ಸಿ4(8)/ವಾ.ಕ್ರಿ.ಯೋ/ಅನುಷ್ಠಾನ 01/2023-24, ໖: 28-03-2024
02. ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ಕರ್ನಾಟಕ ಸರ್ಕಾರದ ಸಚಿವಾಲಯ, ಬೆಂಗಳೂರು ರವರ ಅಧಿಸೂಚನೆ ಸಂಖ್ಯೆ:DPAR/16/HHL/2024, ದಿನಾಂಕ:21-11-2024
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, 2024-25ನೇ ಸಾಲಿನ ಚಟುವಟಿಕೆಗಳು ಮುಕ್ತಾಯವಾಗುತ್ತಲ್ಲಿದ್ದು. ಮುಂದಿನ 2025-26ನೇ ಸಾಲಿನ ಶೈಕ್ಷಣಿಕ ಸಾಲಿನ ಚಟುವಟಿಕೆಗಳನ್ನು ಪ್ರಾರಂಭಿಸಲು ಸದರಿ ಸಾಲಿನಲ್ಲಿ ಎಂದಿನಂತೆ ಅಗತ್ಯ ಪೂರ್ವಸಿದ್ಧತೆಗಾಗಿ ದಿನಾಂಕ: 29.05.2025 ರಿಂದ ಶಾಲೆ ಪ್ರಾರಂಭಿಸಲು ಸೂಚಿಸಲಾಗಿದೆ. ಅದರಂತೆ ವಾರ್ಷಿಕ ಶೈಕ್ಷಣಿಕ ಕ್ರಿಯಾಯೋಜನೆಯ ವೇಳಾಪಟ್ಟಿಯನ್ನು ನಿಗಧಿಪಡಿಸಲಾಗಿದೆ. ಪುಯುಕ್ತ ರಾಜ್ಯದ ಎಲ್ಲಾ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಏಕರೂಪದ ಶೈಕ್ಷಣಿಕ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಲು ಸಹಾಯವಾಗುವಂತೆ ಒಟ್ಟು ವಾರ್ಷಿಕ ದಿನಗಳಲ್ಲಿ ಲಭ್ಯವಾಗುವ ಶೈಕ್ಷಣಿಕ ಚಟುವಟಿಕೆ ಅವಧಿಗಳು, ಕರ್ತವ್ಯದ ದಿನಗಳು ಮತ್ತು ರಜಾ ದಿನಗಳನ್ನಾಧರಿಸಿ ಅದಕ್ಕನುಗುಣವಾಗಿ ವಾರ್ಷಿಕ ಕಾರ್ಯಸೂಚಿಯನ್ನು ಈ ಕೆಳಕಂಡಂತೆ ನಿಗದಿಪಡಿಸಲಾಗಿದ್ದು, ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳಲ್ಲಿ ಅನುಷ್ಠಾನಗೊಳಿಸಿ ಮತ್ತು ಅನುಪಾಲನೆ ಮಾಡಲು ತಿಳಿಸಿದೆ.
No comments:
Post a Comment