Regarding issuing appointment orders to candidates for the posts of Assistant Professor
ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಿ ಸರ್ಕಾರವು ರಾಜ್ಯಪತ್ರ ಹೊರಡಿಸಿದೆ. ಆ ರಾಜ್ಯ ಪತ್ರದಲ್ಲಿ ಏನಿದೆ ಎಂಬುದನ್ನು ತಿಳಿಯಲು ಮಾಹಿತಿ ಓದಿ ಮತ್ತು ಪಿಡಿಎಫ್ ಡೌನ್ಲೋಡ್ ಮಾಡಿಕೊಳ್ಳಿ.
ಕಾಲೇಜು ಶಿಕ್ಷಣ ಇಲಾಖೆಯ ಆಡಳಿತ ವ್ಯಾಪ್ತಿಗೆ ಒಳಪಡುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇರ ನೇಮಕಾತಿಗೆ ಆಯ್ಕೆ ಪ್ರಾಧಿಕಾರವಾದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸರ್ಕಾರಕ್ಕೆ ಸಲ್ಲಿಸಿದ ಅಂತಿಮ ಆಯ್ಕೆ ಪಟ್ಟಿಯನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ಇಡಿ 92 ಡಿಸಿಇ 2023 (ಇ), ದಿನಾಂಕ:03.11.2023 ರಲ್ಲಿ ಪ್ರಕಟಿಸಿದೆ. ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಕಾಲೇಜು ಶಿಕ್ಷಣ ಇಲಾಖೆ) (ಸಹಾಯಕ ಪ್ರಾಧ್ಯಾಪಕರ ನೇಮಕಾತಿ) (ವಿಶೇಷ) ನಿಯಮಗಳು, 2020 ನಿಯಮ 9 ರ ಉಪನಿಯಮ (2) ಮತ್ತು (3)ರನ್ನಯ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅಂತಿಮ ಆಯ್ಕೆ ಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಅರ್ಹತೆಯ ದೃಢೀಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ವಿಚಾರಣೆಗಳು ಪೂರ್ಣಗೊಂಡಿರುವ ಈ ಕೆಳಕಂಡ ಅಭ್ಯರ್ಥಿಗಳನ್ನು ವೇತನ ಶ್ರೇಣಿ ರೂ.57700-182400 (ಯುಜಿಸಿ ವೇತನ ಶ್ರೇಣಿ)ರ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನೇಮಿಸಿ ಆದೇಶಿಸಿದೆ.
ಪಿಡಿಎಫ್ ಡೌನ್ಲೋಡ್ ಮಾಡಿಕೊಳ್ಳಿ.
No comments:
Post a Comment