Tuesday, April 8, 2025

Regarding permission to start English medium (bilingual) classes

  Dailyguru       Tuesday, April 8, 2025
Regarding permission to start English medium (bilingual) classes along with the existing Kannada/other medium in government primary schools in the year 2025-26.

2025-26ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪ್ರಸ್ತುತ ಇರುವ ಕನ್ನಡ/ ಇತರೆ ಮಾಧ್ಯಮದ ಜೊತೆ ಆಂಗ್ಲ ಮಾಧ್ಯಮ (ದ್ವಿಭಾಷಾ) ತರಗತಿಗಳನ್ನು ಪ್ರಾರಂಭಿಸಲು ಅನುಮತಿ ನೀಡುವ ಬಗ್ಗೆ ಕರ್ನಾಟಕ ಸರ್ಕಾರದ ನಡಾವಳಿಗಳು ಪ್ರಕಟ.

ಸರ್ಕಾರದ ಅಧಿಕೃತ ಆದೇಶದ ವಿವರಣೆ ಇಲ್ಲಿದೆ , ಓದಿ


ಓದಲಾಗಿದೆ:

1. ಸರ್ಕಾರದ ಆದೇಶ ಸಂಖ್ಯೆ: ಇಡಿ 109 ಯೋಯೋಕ 2018, : ದಿನಾಂಕ 15.08.2019

2. ಸರ್ಕಾರದ ಆದೇಶ ಸಂಖ್ಯೆ EP 137 PGC 2024 ದಿನಾಂಕ:15.06.2024 ಮತ್ತು ದಿನಾಂಕ:03.09.2024.

3. ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಇವರ ಪತ್ರ 220-2(4) ... 01/2024 -1475438, 2:01.02.2025.
ಪ್ರಸ್ತಾವನೆ:

ಮೇಲೆ ಓದಲಾದ ಕ್ರಮಾಂಕ (1)ರ ಸರ್ಕಾರದ ಆದೇಶದಲ್ಲಿ ರಾಜ್ಯದ 1000 ಸರ್ಕಾರಿ ಶಾಲೆಗಳಲ್ಲಿ 2019-20ನೇ ಸಾಲಿನಿಂದ 1ನೇ ತರಗತಿಯಿಂದ ಹಾಲಿ ಇರುವ ಕನ್ನಡ ಮಾಧ್ಯಮದ ಜೊತೆ ಆಂಗ್ಲ ಮಾಧ್ಯಮ (ದ್ವಿಭಾಷಾ ಮಾಧ್ಯಮ) ತರಗತಿಯನ್ನು ಕೆಲವು ಷರತ್ತುಗಳೊಂದಿಗೆ ಪ್ರಾರಂಭಿಸಲು ಅನುಮತಿ ನೀಡಿ ಆದೇಶಿಸಲಾಗಿರುತ್ತದೆ.

ಮೇಲೆ ಓದಲಾದ ಕ್ರಮಾಂಕ (2)ರ ಸರ್ಕಾರದ ಆದೇಶದಲ್ಲಿ 2024-25ನೇ ಸಾಲಿನ (ಫೆಬ್ರವರಿ) ಅಯವ್ಯಯ ಭಾಷಣದ ಕಂಡಿಕೆ 96(5)ರಲ್ಲಿ '2000 ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ದ್ವಿಭಾಷಾ ಮಾಧ್ಯಮ (ಕನ್ನಡ ಮತ್ತು ಇಂಗ್ಲಿಷ್) ಶಾಲೆಗಳಾಗಿ ಪರಿವರ್ತಿಸಲಾಗುವುದು' ಎಂದು ಘೋಷಿಸಲಾಗಿದ್ದು ಅದರಂತೆ ರಾಜ್ಯದ 1419 ಮತ್ತು 373 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 2024-25ನೇ ಸಾಲಿನಿಂದ 1ನೇ ತರಗತಿಯಿಂದ ಹಾಲಿ ನಡೆಯುತ್ತಿರುವ ಕನ್ನಡ/ಇತರೆ ಮಾಧ್ಯಮದ ಜೊತೆಗೆ ಹೊಸದಾಗಿ ಆಂಗ್ಲ ಮಾಧ್ಯಮ (ದ್ರಿಭಾಷಾ ಮಾಧ್ಯಮ) ತರಗತಿಗಳನ್ನು ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಪ್ರಾರಂಭಿಸಲು ಸರ್ಕಾರದ ಆದೇಶ ಸಂಖ್ಯೆ ಇಡಿ 109 ಯೋಯೋಕ 2018, ದಿನಾಂಕ:18.05.2019 ರಲ್ಲಿನ ಷರತ್ತುಗಳಿಗೊಳವನ್ನು ಅನುಮತಿ ನೀಡಿ ಆದೇಶಿಸಿದೆ.

ಮೇಲೆ ಓದಲಾದ ಕ್ರಮಾಂಕ 3)ರ ಪತ್ರದಲ್ಲಿ విద్యాథిFగళ సంఖ్య ಗಣನೀಯವಾಗಿರುವ ಮತ್ತು ಅವಶ್ಯಕತೆ ಇರುವ ರಾಜ್ಯದ ಒಟ್ಟು 208 ಸರ್ಕಾರಿ ಕಿರಿಯ/ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಪ್ರಸ್ತುತ ಇರುವ ಮಾಧ್ಯಮದ ಜೊತೆಗೆ 2025-26ನೇ ಸಾಲಿನಿಂದ ದ್ವಿಭಾಷಾ ಮಾಧ್ಯಮ(Bilingual) (ಆಂಗ್ಲ ಮಾಧ್ಯಮ) ತರಗತಿಗಳನ್ನು ಸರ್ಕಾರಕ್ಕೆ ಯಾವುದೇ ಆರ್ಥಿಕ ಹೊರೆಯಾಗದಂತೆ ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಪ್ರಾರಂಭಿಸಲು ಸರ್ಕಾರದ ಅನುಮೋದನೆ ಕೋರಿರುತ್ತಾರೆ.

ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ರವರು ಸಲ್ಲಿಸಿರುವ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿ ಈ ಕೆಳಕಂಡಂತೆ ಆದೇಶಿಸಿದೆ.

ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಆದೇಶ ಡೌನ್ಲೋಡ್ ಮಾಡಿಕೊಳ್ಳಿ.

logoblog

Thanks for reading Regarding permission to start English medium (bilingual) classes

Previous
« Prev Post

No comments:

Post a Comment