Regarding the provision of home loans and personal loans at low interest rates in addition to the facilities being provided by banks under salary package accounts to state government employees.
ವಿಷಯ:ರಾಜ್ಯ ಸರ್ಕಾರಿ ನೌಕರರಿಗೆ ಸಂಬಳ ಪ್ಯಾಕೇಜ್ ಖಾತೆಯಡಿ ಬ್ಯಾಂಕುಗಳು ನೀಡುತ್ತಿರುವ ಸೌಲಭ್ಯಗಳ ಜೊತೆಗೆ ಗೃಹ ಸಾಲ, ವೈಯಕ್ತಿಕ ಸಾಲಗಳನ್ನು ಕಡಿಮೆ ಬಡ್ಡಿ ದರದಲ್ಲಿ ನೀಡುವ ಬಗ್ಗೆ ಸಭಾ ಸೂಚನಾ ಪತ್ರ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ರಾಜ್ಯ ಸಚಿವ ಸಂಪುಟದ ತಿರ್ಮಾನಿಸಿದಂತೆ, ಅಧಿಕಾರಿಗಳು/ನೌಕರರ ಮತ್ತು ಅವಲಂಬಿತ ಕುಟುಂಬ ಸದಸ್ಯರ ಹಿತಾಸಕ್ತಿಗಳನ್ನು ರಕ್ಷಿಸುವ ಸಲುವಾಗಿ, ವಿವಿಧ ಬ್ಯಾಂಕುಗಳು ಒದಗಿಸುವ ವಿಶಿಷ್ಟ ಸೌಲಭ್ಯಗಳನ್ನು ಪಡೆಯಲು ಸಹಕಾರಿಯಾಗುವಂತೆ ಸಂಬಳ ಪ್ಯಾಕೇಜ್‌ಗಳ ಅಡಿಯಲ್ಲಿ ಖಾತೆಗಳನ್ನು ತೆರೆಯುವುದು/ಆಯ್ಕೆ ಮಾಡಿಕೊಳ್ಳುವುದನ್ನು ರಾಜ್ಯ ಸರ್ಕಾರವು ಕಡ್ಡಾಯಗೊಳಿಸಿದೆ.
ಸದರಿ ಯೋಜನೆಯಡಿ ಸರ್ಕಾರದ ಎಲ್ಲಾ ಅಧಿಕಾರಿಗಳು/ನೌಕರರು ಬ್ಯಾಂಕುಗಳು ನೀಡುತ್ತಿರುವ ಸಂಬಳ ಪ್ಯಾಕೇಜು ಖಾತೆಯಾಗಿ ಪರಿವರ್ತಿಸಿಕೊಳ್ಳಲು ಬ್ಯಾಂಕುಗಳು ಅನುಕೂಲ ಮಾಡಿಕೊಡ ಬೇಕಾಗಿದ್ದು, ಸದರಿ ವಿಷಯದಲ್ಲಿ ಏನಾದರೂ ಸಮಸ್ಯೆಗಳಿದ್ದಲ್ಲಿ ಅವುಗಳನ್ನು ನಿವಾರಣೆ ಮಾಡುವುದು ಅವಶ್ಯಕವಾಗಿರುತ್ತದೆ.
ಮುಂದುವರೆದು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧಕ್ಷರು ರಾಜ್ಯ ಸರ್ಕಾರಿ ನೌಕರರ ಪರವಾಗಿ ಬ್ಯಾಂಕುಗಳು ಸಂಬಳ ಪ್ಯಾಕೇಜು ಖಾತೆಯಾಗಿ ಪರಿವರ್ತಿಸಿಕೊಳ್ಳುವ ಅಧಿಕಾರಿ/ನೌಕರರಿಗೆ ರಾಷ್ಟ್ರೀಕೃತ ಬ್ಯಾಂಕುಗಳು, ಗೃಹ ಸಾಲ, ವೈಯಕ್ತಿಕ ಸಾಲ ಮತ್ತು ವಾಹನ ಖರೀದಿ ಸಾಲಗಳನ್ನು ರಿಯಾಯಿತಿ ಬಡ್ಡಿ ದರದಲ್ಲಿ ನೀಡುವ ಸಂಬಂಧ ಮನವಿ ಮಾಡಿರುವರು.
ಈ ಹಿನ್ನೆಲೆಯಲ್ಲಿ, ಮೇಲಿನ ವಿಷಯಗಳನ್ನು ಚರ್ಚಿಸಲು ಪ್ರಮುಖ ರಾಷ್ಟ್ರೀಕೃತ ಬ್ಯಾಂಕುಗಳ ಅಧಿಕಾರಿಗಳೊಂದಿಗೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳೊಂದಿಗೆ ಸರ್ಕಾರದ ಕಾರ್ಯದರ್ಶಿ (ವಿತ್ತೀಯ ಸುಧಾರಣೆ) ರವರ ಅಧ್ಯಕ್ಷತೆಯಲ್ಲಿ ದಿನಾಂಕ 15.04.2025 ರಂದು ಮಧ್ಯಾಹ್ನ 4.00 ಗಂಟೆಗೆ, ಕೊಠಡಿ ಸಂಖ್ಯೆ: 701, 7ನೇ ಮಹಡಿ, ಬಹುಮಹಡಿ ಕಟ್ಟಡ, ಬೆಂಗಳೂರು ಇಲ್ಲಿ ಸಭೆಯನ್ನು ನಡೆಸಲು ತೀರ್ಮಾನಿಸಲಾಗಿದೆ.
ಸದರಿ ಸಭೆಗೆ ಅಗತ್ಯ ಮಾಹಿತಿಯೊಂದಿಗೆ ತಪ್ಪದೇ ಹಾಜರಾಗುವಂತೆ ಕೋರಿದೆ.
ಹೆಚ್ಚಿನ ಅಧಿಕೃತ ಮಾಹಿತಿಗಾಗಿ
No comments:
Post a Comment