Regarding suspension of issuance of fresh notifications for recruitment to posts in State Civil Services
ರಾಜ್ಯ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳ ನೇಮಕಾತಿಗಾಗಿ ಹೊಸದಾಗಿ ಅಧಿಸೂಚನೆ ಹೊರಡಿಸುವುದನ್ನು ತಡೆಹಿಡಿಯುವ ಬಗ್ಗೆ.
ಉಲ್ಲೇಖ: ಸಮ ಸಂಖ್ಯೆಯ ಸುತ್ತೋಲೆ ದಿನಾಂಕ 25.11.2024
ಮತ್ತು ದಿನಾಂಕ: 29.03.2025
ರಾಜ್ಯ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳ ನೇಮಕಾತಿಗಾಗಿ ಹೊಸದಾಗಿ ಅಧಿಸೂಚನೆ ಹೊರಡಿಸುವುದನ್ನು ತಡೆಹಿಡಿಯುವ ಬಗ್ಗೆ ಉಲ್ಲೇಖಿತ ದಿನಾಂಕ:25,11.2024ರ ಸುತ್ತೋಲೆಯಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೂ ಹೊರಡಿಸಬಾರದೆಂದು ಸೂಚಿಸಲಾಗಿರುತ್ತದೆ ಮುಂದುವರೆದು ದಿನಾಂಕ:29.03.2025ರ ಸುತ್ತೋಲೆಯಲ್ಲಿ ದಿನಾಂಕ.25.11.2024ರ ನಂತರ ಹೊರಡಿಸಿರುವ ಅಧಿಸೂಚನೆಗಳನ್ನು ಕೂಡಲೇ ಹಿಂಪಡೆಯುವಂತೆ ಸೂಚಿಸಲಾಗಿರುತ್ತದೆ.
ದಿನಾಂಕ: 25.11.2024 ರಲ್ಲಿನ ಸೂಚನೆಗಳು ದಿನಾಂಕ:28.10.2024 ರಿಂದಲೇ ಅನ್ವಯವಾಗುವುದರಿಂದ ದಿನಾಂಕ:28.10.2024 ರ ನಂತರ ನೇರ ನೇಮಕಾತಿಗಾಗಿ ಅಥವಾ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗಾಗಿ ಯಾವುದೇ ಹೊಸ ಅಧಿಸೂಚನೆಗಳನ್ನು ಹೊರಡಿಸಿದ್ದಲ್ಲಿ ಈ ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಲು ಆಯಾಯ ನೇಮಕಾತಿ ಪ್ರಾಧಿಕಾರಗಳಿಗೆ ಈ ಮೂಲಕ ಸೂಚಿಸಿದೆ.
No comments:
Post a Comment