Revision of medical allowance rates for government employees.
ಸರ್ಕಾರಿ ನೌಕರರ ವೈದ್ಯಕೀಯ ಭತ್ಯೆ ದರಗಳ ಪರಿಷ್ಕರಣೆ.
.
1. ದಿನಾಂಕ 28.12.1996ರ ಸರ್ಕಾರಿ ಆದೇಶ ಸಂಖ್ಯೆ: ಎಫ್‌ಡಿ 5 ಎಸ್‌ಆರ್‌ಪಿ 96.
2. ದಿನಾಂಕ 11.01.2019ರ ಸರ್ಕಾರಿ ಆದೇಶ ಸಂಖ್ಯೆ: ಎಫ್‌ಡಿ 24 ಎಸ್‌ಆರ್‌ಪಿ 2018(VI)
3. ದಿನಾಂಕ 22.07.2024ರ ಸರ್ಕಾರಿ ಆದೇಶ ಸಂಖ್ಯೆ: ಎಫ್‌ಡಿ 21 ಎಸ್‌ಆರ್‌ಪಿ 2024
4. ದಿನಾಂಕ 23.08.2024ರ ಸರ್ಕಾರಿ ಆದೇಶ ಸಂಖ್ಯೆ: ಎಫ್‌ಡಿ 21 ಎಸ್‌ಆರ್‌ಪಿ 2024
5. ದಿನಾಂಕ 17.08.2021ರ ಸರ್ಕಾರಿ ಆದೇಶ ಸಂಖ್ಯೆ: ಸಿಆಸುಇ 16 ಎಸ್‌ಎಂಆರ್ 2020.
6. ದಿನಾಂಕ 05.09.2022ರ ಸರ್ಕಾರಿ ಆದೇಶ ಸಂಖ್ಯೆ: ಸಿಆಸುಇ 16 ಎಸ್‌ಎಂಆರ್ 2020
7. ದಿನಾಂಕ 09.03.2023ರ ಸರ್ಕಾರಿ ಆದೇಶ ಸಂಖ್ಯೆ: ಸಿಆಸುಇ 16 ಎಸ್‌ಎಂಆರ್ 2020 (ಭಾಗ-5)
ಪ್ರಸ್ತಾವನೆ:
:
thi
ಓದಲಾಗಿದೆ:
ರಾಜ್ಯ ಸರ್ಕಾರದ ನೀತಿ ನಿರ್ಣಯದಂತೆ ಮೇಲೆ (6)ರಲ್ಲಿ ಓದಲಾದ 05-09-2022ರ ಸರ್ಕಾರಿ ಆದೇಶದಲ್ಲಿ ನಗದುರಹಿತ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು (ಕೆ.ಎ.ಎಸ್.ಎಸ್) ಅನುಷ್ಠಾನಗೊಳಿಸಲು ಆದೇಶಗಳನ್ನು ಹೊರಡಿಸಲಾಗಿರುತ್ತದೆ. ಅದರಂತೆ, ಸರ್ಕಾರದ ನೀತಿಯಲ್ಲಿ ವಿವರಿಸಿರುವಂತೆ ಸದರಿ ಯೋಜನೆಯನ್ನು ಅನುಷ್ಠಾನಗೊಳಿಸಲು ವಿಸ್ತ್ರತವಾದ ಮಾರ್ಗಸೂಚಿಗಳನ್ನು ಸಹ ಹೊರಡಿಸಲಾಗಿರುತ್ತದೆ.
ಮೇಲೆ (3)ರಲ್ಲಿ ಓದಲಾದ ದಿನಾಂಕ 22-07-2024ರ ಸರ್ಕಾರಿ ಆದೇಶದಲ್ಲಿ ವೇತನ ಶ್ರೇಣಿಗಳ ಮತ್ತು ವೇತನಕ್ಕೆ ಹೊಂದಿಕೊಂಡಿರುವ ನಿರ್ದಿಷ್ಟ ಭತ್ಯೆಗಳ ಪರಿಷ್ಕರಣೆ ಮತ್ತು ಪಿಂಚಣಿ ಪರಿಷ್ಕರಣೆ ಕುರಿತಂತೆ 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಲು ಆದೇಶಗಳನ್ನು ಹೊರಡಿಸಲಾಗಿರುತ್ತದೆ. ಅದರಂತೆ, ಮೇಲೆ (4)ರಲ್ಲಿ ಓದಲಾದ ದಿನಾಂಕ 23-08-2024ರ ಸರ್ಕಾರಿ ಆದೇಶದಲ್ಲಿ ಪರಿಷ್ಕೃತ ವೇತನ ಶ್ರೇಣಿಗಳನ್ನು ಅನುಷ್ಠಾನಗೊಳಿಸಿ ವಿಸ್ತ್ರತವಾದ ಆದೇಶಗಳನ್ನು ಹೊರಡಿಸಲಾಗಿರುತ್ತದೆ.
ಗ್ರೂಪ್-ಸಿ ಮತ್ತು ಗ್ರೂಪ್-ಡಿ ವೃಂದದ ರಾಜ್ಯ ಸರ್ಕಾರಿ ನೌಕರರುಗಳಿಗೆ ಲಭ್ಯವಿರುವ ವೈದ್ಯಕೀಯ ಭತ್ಯೆ ದರಗಳ ಪರಿಷ್ಕರಣೆ ಕುರಿತಂತೆ 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸುಗಳನ್ನು ಸರ್ಕಾರವು ಅಂಗೀಕರಿಸಿರುತ್ತದೆ. ಅದರಂತೆ, ಈ ಕೆಳಕಂಡ ಆದೇಶವನ್ನು ಹೊರಡಿಸಿದೆ.
ಹೆಚ್ಚಿನ ಮಾಹಿತಿಗಾಗಿ.
No comments:
Post a Comment