KSPSTA

RECENT INFORMATIONS

Search This Blog

Thursday, May 15, 2025

Circular regarding organizing the State Level State Government Employees Sports Meet for the year 2024-25

  Dailyguru       Thursday, May 15, 2025
Circular regarding organizing the State Level State Government Employees Sports Meet for the year 2024-25

2024-25ನೇ ಸಾಲಿನ ರಾಜ್ಯಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಸಂಘಟಿಸುವ ಬಗ್ಗೆ ಸುತ್ತೋಲೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, 2024-25ನೇ ಸಾಲಿನ ರಾಜ್ಯಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಶಿವಮೊಗ್ಗ ನಗರದಲ್ಲಿ ದಿನಾಂಕ:18-05-2025 ರಿಂದ 20-05-2025 ರವರೆಗೆ (ಮೂರು ದಿನ) ನಡೆಸಲು ತೀರ್ಮಾನಿಸಲಾಗಿರುತ್ತದೆ. ಸದರಿ ಕ್ರೀಡಾಕೂಟವನ್ನು ಈ ಕೆಳಕಂಡಂತೆ ಆಯೋಜಿಸಲು ಸೂಚಿಸಿ ಸುತ್ತೋಲೆಯನ್ನು ಹೊರಡಿಸಿದೆ.

ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸಲು ನಿಯಮಾವಳಿಗಳು:

1.

ಸದರಿ ಕ್ರೀಡಾಕೂಟದಲ್ಲಿ ರಾಜ್ಯ ಸರ್ಕಾರದ ಕೆ.ಜಿ.ಐ.ಡಿ. ಸಂಖ್ಯೆಯನ್ನು ಹೊಂದಿರುವ ಎಲ್ಲಾ ಖಾಯಂ ನೌಕರರು ಭಾಗವಹಿಸಲು ಅರ್ಹರಾಗಿರುತ್ತಾರೆ. ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ವಿಜೇತರಾದ ಕ್ರೀಡಾಪಟುಗಳು ಆನೈನ್ ಮೂಲಕ ನೊಂದಣಿ ಮಾಡಿಕೊಂಡಲ್ಲಿ ಮಾತ್ರ ಸ್ಪರ್ಧೆಗಳಲ್ಲಿ ಭಾಗವಹಿಸಲು ಹಾಗೂ ಸೌಲಭ್ಯ ಪಡೆಯಲು ಮಾತ್ರ ಅರ್ಹರಿರುತ್ತಾರೆ.

2. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿನ ತರಬೇತುದಾರರು, ಹಾಗೂ ಕ್ರೀಡಾಕೋಟಾದಡಿ ನೇಮಕಗೊಂಡ ನೌಕರರು ಭಾಗವಹಿಸಲು ಅರ್ಹರಾಗಿರುವುದಿಲ್ಲ.

3. ಎಲ್ಲಾ ಕ್ರೀಡಾಪಟುಗಳು ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಕ್ರೀಡೆಯಲ್ಲಿ ಭಾಗವಹಿಸಲು ನೀಡಿರುವ ಅಧಿಕೃತ ಗುರುತಿನ ಚೀಟಿ ಕಡ್ಡಾಯವಾಗಿ ಸಲ್ಲಿಸತಕ್ಕದ್ದು.

4. ಸಂಗೀತ, ನೃತ್ಯ ಮತ್ತು ಕಲಾ ಶಿಕ್ಷಕರು, ಸಂಗೀತ, ನೃತ್ಯ ಮತ್ತು ಕರಕುಶಲ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹರಾಗಿರುವುದಿಲ್ಲ.

5.

ದಿನಗೂಲಿ ನೌಕರರು, ಅರೆಕಾಲಿಕ ನೌಕರರು, ನಿಗಮ/ಮಂಡಳಿ ನೌಕಕರು ಮತ್ತು ಇತರೇ ಅರ್ಹರಾಗಿರುವುದಿಲ್ಲ. ಕ್ಷೇಮಾಭಿವೃದ್ಧಿ ನೌಕರರು, ಗುತ್ತಿಗೆ ನೌಕರರು, ಖಾಯಂ ಅಲ್ಲದ ನೌಕರರು ಭಾಗವಹಿಸಲು

6. ಪೊಲೀಸ್ (ಸಮವಸ್ತ್ರಧಾರಿಗಳಿಗೆ) ಹಾಗೂ ಕ್ರೀಡಾ ಮೀಸಲಾತಿಯಲ್ಲಿ ಆಯ್ಕೆಯಾದ ಎಲ್ಲಾ ನೌಕರರು ಭಾಗವಹಿಸಲು ಅರ್ಹರಾಗಿರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ.



logoblog

Thanks for reading Circular regarding organizing the State Level State Government Employees Sports Meet for the year 2024-25

Previous
« Prev Post

No comments:

Post a Comment