KSPSTA

RECENT INFORMATIONS

Search This Blog

Thursday, May 8, 2025

Government Employees DA Rates Revison Order

  Dailyguru       Thursday, May 8, 2025
Dearness Allowance Rates Revision Order

(1) ದಿನಾಂಕ: 23.08.2024ರ ಸರ್ಕಾರಿ ಆದೇಶ ಸಂಖ್ಯೆ: ಎಫ್‌ಡಿ 21 ಎಸ್‌ಆರ್‌ಪಿ 2024

(2) ದಿನಾಂಕ: 27.11.2024ರ ಸರ್ಕಾರಿ ಆದೇಶ ಸಂಖ್ಯೆ: ಎಫ್‌ಡಿ 43 ಎಸ್‌ಆರ್‌ಪಿ 2024

(3) ಭಾರತ ಸರ್ಕಾರದ ದಿನಾಂಕ 02.04.2025ರ ಅಧಿಕೃತ ಜ್ಞಾಪನ ಸಂಖ್ಯೆ:1/1(1)/2025

ಸರ್ಕಾರದ ಆದೇಶ ಸಂಖ್ಯೆ: ಆಇ 8 ಎಸ್‌ಆರ್‌ಪಿ 2025

and 1

ಬೆಂಗಳೂರು, ದಿನಾಂಕ: 7ನೇ ಮೇ 2025

2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜನವರಿ 2025 ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇಕಡ 10.75 ರಿಂದ ಶೇಕಡ 12.25 ಗೆ ಪರಿಷ್ಕರಿಸಿ ಮಂಜೂರು ಮಾಡಲು ಸರ್ಕಾರವು ಹರ್ಷಿಸುತ್ತದೆ.

2. ತುಟ್ಟಿಭತ್ಯೆಯ ಉದ್ದೇಶಕ್ಕಾಗಿ “ಮೂಲ ವೇತನ” ಎಂದರೆ ಸರ್ಕಾರಿ ನೌಕರನು ಧಾರಣ ಮಾಡಿರುವ ಹುದ್ದೆಗೆ ಅನ್ವಯವಾಗುವ ವೇತನ ಶ್ರೇಣಿಯಲ್ಲಿ ಪಡೆಯುತ್ತಿರುವ ವೇತನ ಮತ್ತು ಅದರಲ್ಲಿ,

(ಅ) 2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಸ್ಥಗಿತ ವೇತನ ಬಡ್ತಿಯನ್ನು ನೀಡಲಾಗಿದ್ದರೆ, ಆ ಸ್ಥಗಿತ ವೇತನ ಬಡ್ತಿ,

(ಆ) 2024ರ ಕರ್ನಾಟಕ ನಾಗರಿಕ ಸೇವಾ (ಪರಿಷ್ಕೃತ ವೇತನ) ನಿಯಮಗಳ ನಿಯಮ 3(ಸಿ) ಯನ್ನು ಓದಿಕೊಂಡು 7ನೇ ನಿಯಮದ (3)ನೇ ಉಪನಿಯಮದ ಮೇರೆಗೆ ಅವನಿಗೆ ನೀಡಲಾದ ವೈಯಕ್ತಿಕ ವೇತನ ಯಾವುದಾದರೂ ಇದ್ದರೆ, ಆ ವೈಯಕ್ತಿಕ ವೇತನ,

ಹೆಚ್ಚಿನ ಮಾಹಿತಿಗಾಗಿ ಪಿಡಿಎಫ್ ಡೌನ್ಲೋಡ್ ಮಾಡಿಕೊಳ್ಳಿ.
logoblog

Thanks for reading Government Employees DA Rates Revison Order

Previous
« Prev Post

No comments:

Post a Comment