Minority College PUC Free Admission 2025
ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಸತಿ ಪದವಿ ಪೂರ್ವ ಕಾಲೇಜುಗಳು ಹಾಗೂ ಉನ್ನತೀಕರಿಸಿದ ಮೌಲಾನಾ ಆಜಾದ್ ಪದವಿ ಪೂರ್ವ ಕಾಲೇಜುಗಳಲ್ಲಿನ 2025-26 ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿ.ಯು.ಸಿ ತರಗತಿಗೆ ಉಚಿತ ಪ್ರವೇಶಾತಿಗಾಗಿ ಅರ್ಜಿ ಅಹ್ವಾನಿಸುವ ಕುರಿತು.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲಕ್ಕಾಗಿ ರಾಜ್ಯ ಪಠ್ಯಕ್ರಮದಲ್ಲಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜುಗಳು / ಇಂಟಿಗ್ರೇಟೆಡ್ (ಉನ್ನತೀಕರಣಗೊಂಡ) ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ/ಪದವಿ ಪೂರ್ವ ಕಾಲೇಜುಗಳು, ಡಾ || ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ/ ಪದವಿ ಪೂರ್ವ ಕಾಲೇಜುಗಳು ಮತ್ತು ಸರ್ಕಾರಿ ಮುಸ್ಲಿಂ ವಸತಿ ಶಾಲೆ/ ಪದವಿ ಪೂರ್ವ ಕಾಲೇಜುಗಳು ಹಾಗೂ ಉನ್ನತೀಕರಿಸಿದ ಮೌಲಾನಾ ಆಜಾದ್ ಪದವಿ ಪೂರ್ವ ಕಾಲೇಜುಗಳು ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುತ್ತವೆ.
ಈ ಶಾಲಾ/ಕಾಲೇಜುಗಳಿಗೆ ಅಲ್ಪಸಂಖ್ಯಾತರ ಸಮುದಾಯಗಳಾದ ಮುಸ್ಲಿಂ ಕ್ರೈಸ್ತರು, ಸಿಖ್ಯರು, ಜೈನರು, ಭೌಧರು ಮತ್ತು ಪಾರ್ಸಿ ಸಮುದಾಯಗಳಿಗೆ ಸೇರಿದ ಹಾಗೂ ಪ.ಜಾತಿ, ಪ.ಪಂಗಡ ಮತ್ತು ಹಿಂದುಳಿದ ವರ್ಗಗಳಿಗೆ ಸೇರಿದ ಎಸ್. ಎಸ್. ಎಲ್.ಸಿ/ತತ್ಸಮಾನ ಪರೀಕ್ಷೆ ತೇರ್ಗಡೆಯಾದ ವಿದ್ಯಾರ್ಥಿಗಳು ಪ್ರಥಮ ಪಿ.ಯು.ಸಿ ತರಗತಿಗೆ ಉಚಿತ ಪ್ರವೇಶಾತಿಗಾಗಿ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.
ಆದುದರಿಂದ, ಎಲ್ಲಾ ಜಿಲ್ಲೆಗಳ ಜಿಲ್ಲಾ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜುಗಳು / ಇಂಟಿಗ್ರೇಟೆಡ್ (ಉನ್ನತೀಕರಣಗೊಂಡ) ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ/ಪದವಿ ಪೂರ್ವ ಕಾಲೇಜುಗಳು, ಡಾ|| ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆ/ ಪದವಿ ಪೂರ್ವ ಕಾಲೇಜುಗಳು ಮತ್ತು ಸರ್ಕಾರಿ ಮುಸ್ಲಿಂ ವಸತಿ ಶಾಲೆ/ಪದವಿ ಪೂರ್ವ ಕಾಲೇಜುಗಳು ಹಾಗೂ ಉನ್ನತೀಕರಿಸಿದ ಮೌಲಾನಾ ಆಜಾದ್ ಪದವಿ ಪೂರ್ವ ಕಾಲೇಜುಗಳಲ್ಲಿ ಶೇಕಡಾ 100 ರಷ್ಟು ದಾಖಲಾತಿ ಹೊಂದಲು ವ್ಯಾಪಕ ಪ್ರಚಾರ ಮತ್ತು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಈ ಮೂಲಕ ಸೂಚಿಸಿದೆ.
ಹೆಚ್ಚಿನ ಮಾಹಿತಿಗಾಗಿ.
No comments:
Post a Comment