Order regarding creation of posts of officers/staff for 02 newly established Indian Reserve Forces in the State of Karnataka
ಕರ್ನಾಟಕ ರಾಜ್ಯದಲ್ಲಿ ಹೊಸದಾಗಿ ಸ್ಥಾಪಿಸಲಾಗಿರುವ 02 ಭಾರತೀಯ ಮೀಸಲು ಪಡೆಗಳಿಗೆ ಅಧಿಕಾರಿ/ಸಿಬ್ಬಂದಿಗಳ ಹುದ್ದೆಗಳನ್ನು ಸೃಜಿಸುವ ಕುರಿತು-ಆದೇಶ.
ಓದಲಾಗಿದೆ:
1. ಸರ್ಕಾರದ ಆದೇಶ ಸಂಖ್ಯೆ: ಹೆಚ್‌ಡಿ 78 ಪಿಓಪಿ 2024, ದಿನಾಂಕ: 29/11/2024.
2. ಮಹಾ ನಿರ್ದೇಶಕರು ಮತ್ತು ಆರಕ್ಷಕ ಮಹಾ ನಿರೀಕ್ಷಕರು ಇವರ ಪತ್ರ ಸಂಖ್ಯೆ: ಪಿ&ಸಿ(5)/01/2024-25, : 23/12/2024.
ಪ್ರಸ್ತಾವನೆ:
ಮೇಲೆ ಓದಲಾದ (1)ರ ಆದೇಶದಲ್ಲಿ, ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಘಟಕದ ಅಧೀನದಲ್ಲಿ ಹೊಸದಾಗಿ 02 ಭಾರತೀಯ ಮೀಸಲು ಪೊಲೀಸ್ ಪಡೆಗಳನ್ನು ನಂದಿ ಬೆಟ್ಟದ ಬಳಿಯ ಆವತಿ ಗ್ರಾಮದ ಕೂಡುಗುರ್ಕಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಮತ್ತು ಕೆಜಿಎಫ್ ಇಂಡಸ್ಟ್ರಿಯಲ್ ಕಾರಿಡಾರ್/ಇಂಡಸ್ಟ್ರಿಯಲ್ ಟೌನ್‌ಶಿಪ್ ಪ್ರದೇಶ ಬಂಗಾರದ ಗಣಿ ಗ್ರಾಮದಲ್ಲಿ ಸ್ಥಾಪಿಸಲು ಮಂಜೂರಾತಿ ನೀಡಿ ಆದೇಶಿಸಲಾಗಿದೆ.
ಮೇಲೆ ಓದಲಾದ (2)ರ ಪತ್ರದಲ್ಲಿ ಮಹಾ ನಿರ್ದೇಶಕರು ಮತ್ತು ಆರಕ್ಷಕ ಮಹಾ ನಿರೀಕ್ಷಕರು ಇವರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ, ನಂದಿ ಬೆಟ್ಟದ ಬಳಿಯ ಆವತಿ ಗ್ರಾಮದ ಕೂಡುಗುರ್ಕಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಮತ್ತು ಕೆಜಿಎಫ್ ಇಂಡಸ್ಟ್ರಿಯಲ್ ಕಾರಿಡಾರ್/ಇಂಡಸ್ಟ್ರಿಯಲ್ ಟೌನ್‌ಶಿಪ್ ಪ್ರದೇಶ ಬಂಗಾರದ ಗಣಿ ಗ್ರಾಮದಲ್ಲಿ ಹೊಸದಾಗಿ ಸೃಜಿಸಲಾಗಿರುವ 02 ಭಾರತೀಯ ಮೀಸಲು ಪಡೆಗಳಿಗೆ ಕೆಳಕಂಡಂತೆ ಅಧಿಕಾರಿ/ಸಿಬ್ಬಂದಿಗಳ ಹುದ್ದೆಗಳನ್ನು ಸೃಜಿಸುವುದು ಅವಶ್ಯಕವಾಗಿರುತ್ತದೆಂದು ತಿಳಿಸಿ, ವಿವರಗಳನ್ನು ಕೆಳಕಂಡಂತೆ ಒದಗಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ.
No comments:
Post a Comment