Press note Regarding 384 Gazetted Probationer Main Examination.
ಆಯೋಗದ ವತಿಯಿಂದ ದಿನಾಂಕ:05-05-2025ರಂದು ನಡೆಸಲಾದ ಗೆಜೆಟೆಡ್ ಪ್ರೊಬೆಷನರ್ ಹುದ್ದೆಗಳ ಮುಖ್ಯ ಪರೀಕ್ಷೆಯ ಪ್ರಬಂಧ ಪತ್ರಿಕೆಯ ಪರೀಕ್ಷೆಯ ಸಂದರ್ಭದಲ್ಲಿ ಬೆಂಗಳೂರಿನ ಬಿಬಿಎಂಪಿ ಸಂಯುಕ್ತ ಪದವಿ ಪೂರ್ವ ಕಾಲೇಜು. ಕಸ್ತೂರ ಬಾ ನಗರ, ಮೈಸೂರು ರಸ್ತೆ ಇಲ್ಲಿ ನಡೆದ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಸಾಧ್ಯತೆಯ ಬಗ್ಗೆ ಕೆಲವು ಸಮೂಹ ಮಾಧ್ಯಮಗಳು ವರದಿ ಮಾಡಿವೆ.
ಈ ವಿಷಯದ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಲಾಗಿದ್ದು, ಪರೀಕ್ಷಾ ಉಪ ಕೇಂದ್ರದ ಮೇಲ್ವಿಚಾರಕರು ಮತ್ತು ಆಯೋಗದಿಂದ ನಿಯೋಜಿತರಾದ ಸ್ಥಳೀಯ ನಿರೀಕ್ಷಣಾಧಿಕಾರಿಗಳಿಂದ ವಿಸ್ತ್ರತವಾದ ವರದಿಗಳನ್ನು ಪಡೆಯಲಾಗಿದೆ. ಕರ್ನಾಟಕ ಲೋಕಸೇವಾ ಆಯೋಗವು ಪ್ರೊಬೇಷನರಿ ಪರೀಕ್ಷೆಗಳೂ ಸೇರಿದಂತೆ ವಿವಿಧ ನೇಮಕಾತಿ ಪರೀಕ್ಷೆಗಳನ್ನು ನಡೆಸುವಾಗ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗದಂತೆ ಮತ್ತು ಪರೀಕ್ಷಾ ಗೌಪ್ಯತೆಯನ್ನು ಕಾಪಾಡುವ ಮತ್ತು ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸುವ ಸಲುವಾಗಿ ಹಾಗೂ ದುರಾಚಾರ ಪ್ರಕರಣಗಳು ನಡೆಯದಂತೆ ತಡೆಯಲು ಹಲವು ಹಂತಗಳ ಸುರಕ್ಷಾ ಕ್ರಮಗಳನ್ನು ಅಳವಡಿಸಿಕೊಳ್ಳಲಾಗಿರುತ್ತದೆ. ಅದರಂತೆಯೇ ಈ ಪರೀಕ್ಷೆಯಲ್ಲಿಯೂ ಸಹ ಪ್ರಶ್ನೆ ಪತ್ರಿಕೆಯ ಭದ್ರತೆಗಾಗಿ ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದ್ದು, ಮೊಹರು ಮಾಡಿದ ಪೆಟ್ಟಿಗೆ, ಮೊಹರು ಮಾಡಿದ ಲೋಹದ ಟ್ರಂಕ್. ಮೊಹರು ಮಾಡಿದ ಟ್ಯಾಂಪರ್ ಎವಿಡೆಂಟ್ ಕವರ್‌ಗಳನ್ನು ಇತ್ಯಾದಿ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿತ್ತು. ಅದರೊಂದಿಗೆ ಪ್ರಶ್ನೆಪತ್ರಿಕೆಗಳನ್ನು ಸಾಗಿಸುವಾಗ ಅವು ಹಾನಿಯಾಗದಂತೆ ಸಂರಕ್ಷಿಸಲು ನೀರು ನಿರೋಧಕ ಪ್ಲಾಸ್ಟಿಕ್ ಕವಗರ್‌ಗಳನ್ನು ದ್ರವ ಪದಾರ್ಥಗಳಿಂದ ಸುರಕ್ಷಿತವಾಗಿ ಸಂರಕ್ಷಿಸುವ ಉದ್ದೇಶಕ್ಕಾಗಿ ಮಾತ್ರ ಉಪಯೋಗಿಸಲಾಗಿದ್ದು, ಅದು ಟ್ಯಾಂಪರ್ ಎವಿಡೆಂಟ್ ಕವರ್ ಆಗಿರುವುದಿಲ್ಲ.
ಸದರಿ ಪರೀಕ್ಷೆಯ ಪರೀಕ್ಷಾ ಉಪಕೇಂದ್ರಕ್ಕೆ ವಿತರಿಸಲಾದ ಪ್ರಶ್ನೆ ಪತ್ರಿಕೆಗಳನ್ನೊಳಗೊಂಡ ಪೆಟ್ಟಿಗೆಗಳು, ಟ್ರಂಕ್‌ಗಳು ಮತ್ತು ಟ್ಯಾಂಪರ್ ಎವಿಡೆಂಟ್ ಕವರಳಲ್ಲಿನ ಎಲ್ಲಾ ಭದ್ರತಾ ಮೊಹರುಗಳು ಕ್ರಮಬದ್ಧವಾಗಿಯೇ ಇರುವುದು ಕಂಡುಬಂದಿರುತ್ತದೆ. ಇದನ್ನು ಅಭ್ಯರ್ಥಿಗಳು, ಉಪ-ಕೇಂದ್ರದ ಮೇಲ್ವಿಚಾರಕರು, ಸ್ಥಳೀಯ ನಿರೀಕ್ಷಣಾಧಿಕಾರಿಗಳು ಮತ್ತು ಕೊಠಡಿ ಸಂವೀಕ್ಷಕರು ಖಚಿತಪಡಿಸಿದ್ದಾರೆ. ಸದರಿ ಉಪ-ಕೇಂದ್ರಕ್ಕಾಗಿ ಕೊನೆಯ ಪದರದ ಪ್ಲಾಸ್ಟಿಕ್ ಕವರ್ಗಳಲ್ಲಿ ಅಳವಡಿಸಲಾದ ಪ್ರಶ್ನೆಸಹಿತ ಉತ್ತರ ಪುಸ್ತಿಕೆಗಳ ಸಂಖ್ಯೆ ಇತರ ಕೇಂದ್ರಗಳಿಗೆ ಸಾಮಾನ್ಯವಾಗಿ ವಿತರಿಸಲಾದ ಪ್ರಶ್ನೆ ಪತ್ರಿಕೆಗಳಿಗಿಂತ ದುಪ್ಪಟ್ಟಾಗಿತ್ತು.
ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಪ್ರಕಟಣೆ ಡೌನ್ಲೋಡ್ ಮಾಡಿಕೊಳ್ಳಿ.
No comments:
Post a Comment