Pressnote regarding kannada compulsory exemptions for the various posts published
ವಿವಿಧ ಹುದ್ದೆಗಳಿಗೆ ಕಡ್ಡಾಯ ಕನ್ನಡ ಪರೀಕ್ಷೆಗೆ ವಿನಾಯಿತಿ ಪಡೆಯಲು ಪತ್ರಿಕಾ ಪ್ರಕಟಣೆಯನ್ನು ಪ್ರಕಟಿಸಲಾಗಿದೆ.
ಕರ್ನಾಟಕ ಸರ್ಕಾರದ ಅಧಿಸೂಚನೆ ಸಂಖ್ಯೆ:ಸಿಆಸುಇ 102 ಸೇವನೆ 2022. ದಿನಾಂಕ: 18-03-2025ರನ್ವಯ ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು, 2021ರ ನಿಯಮ 7ರ ತಿದ್ದುಪಡಿಯಲ್ಲಿ "ಅಭ್ಯರ್ಥಿಯು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅಥವಾ ರಾಜ್ಯ ಸರ್ಕಾರವು ಅದಕ್ಕೆ ತತ್ಸಮಾನವೆಂದು ಘೋಷಿಸಿದ ಯಾವುದೇ ಪರೀಕ್ಷೆಯಲ್ಲಿ ಅಥವಾ ಎಸ್.ಎಸ್ಎಲ್.ಸಿ. ಗಿಂತ ಉನ್ನತ ಮಟ್ಟದ ಪರೀಕ್ಷೆಗಳಲ್ಲಿ ಕನ್ನಡ ವಿಷಯವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಅಭ್ಯಸಿಸಿದ್ದರೆ ಅಥವಾ ಕನ್ನಡ ಮಾಧ್ಯಮದಲ್ಲಿ ಅಧ್ಯಯನ ಮಾಡಿ ಇಂತಹ ಪರೀಕ್ಷೆಗಳನ್ನು ಪಾಸು ಮಾಡಿದ್ದರೆ ಅಥವಾ ಆಯೋಗ ಅಥವಾ ಇನ್ನಿತರೆ ಯಾವುದೇ ಆಯ್ಕೆ ಪ್ರಾಧಿಕಾರವು ಈ ಹಿಂದೆ ನಡೆಸಿದ ಕನ್ನಡ ಭಾಷೆಯ ಪರೀಕ್ಷೆಯಲ್ಲಿ (ಕಡ್ಡಾಯ ಕನ್ನಡ ಪರೀಕ್ಷೆ) ಉತ್ತೀರ್ಣರಾಗಿದ್ದರೆ ಅಂತಹ ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆಯಿಂದ ವಿನಾಯಿತಿ ನೀಡತಕ್ಕದೆಂದು" ನಿರ್ದಿಷ್ಟಪಡಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ.
No comments:
Post a Comment