Regarding extension of the survey period of Scheduled Caste Survey 2025
ಪರಿಶಿಷ್ಟ ಜಾತಿ ಸಮೀಕ್ಷೆ -2025 ರ ಸಮೀಕ್ಷಾ ಅವಧಿಯನ್ನು ವಿಸ್ತರಿಸುವ ಕುರಿತು.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ ಸರ್ಕಾರದ ಆದೇಶದಲ್ಲಿ, ಕರ್ನಾಟಕ ರಾಜ್ಯದಲ್ಲಿ ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಯ 101 ಜಾತಿಗಳಿಗೆ ಸೇರಿದವರ ಪ್ರಾತಿನಿಧ್ಯತೆ ಕುರಿತು Empirical Data ಪಡೆದು ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ (ಉಪ ವರ್ಗೀಕರಣ) ಬಗ್ಗೆ ವರದಿ ಸಲ್ಲಿಸಲು ಮಾನ್ಯ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳಾದ ಡಾ. ಹೆಚ್.ಎನ್. ನಾಗಮೋಹನ್ ದಾಸ್ ಇವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗವನ್ನು ರಚಿಸಲಾಗಿರುತ್ತದೆ.
ದಿನಾಂಕ: 27-03-2025 ರಂದು ಆಯೋಗವು ಸಲ್ಲಿಸಿದ ಮಧ್ಯಂತರ ವರದಿಯ ಆಧಾರದ ಮೇರೆಗೆ ವೈಜ್ಞಾನಿಕವಾದ ದತ್ತಾಂಶವನ್ನು (Empirical Data) ಸಂಗ್ರಹಿಸಲು ದಿನಾಂಕ: 05-05-2025 ರಿಂದ ಕರ್ನಾಟಕ ಸರ್ಕಾರದ ವತಿಯಿಂದ ಮನೆ-ಮನೆ ಸಮೀಕ್ಷೆ ನಡೆಸುತ್ತಿದ್ದು, ಪ್ರಸ್ತುತ ಪ್ರಗತಿಯಲ್ಲಿರುತ್ತದೆ.
ಮಾನ್ಯ ಶಾಸಕರುಗಳು, ಹಲವು ಸಂಘ ಸಂಸ್ಥೆಗಳು ಸಮೀಕ್ಷೆ ವೇಳೆ ಉದ್ಭವಿಸಿರುವ ಕೆಲವೊಂದು ಸಮಸ್ಯೆಗಳನ್ನು ಸರಿಪಡಿಸಲು ಸಮೀಕ್ಷಾ ದಿನಾಂಕವನ್ನು ವಿಸ್ತರಿಸಬೇಕೆಂದು ಕೋರಿರುವ ಹಿನ್ನೆಲೆಯಲ್ಲಿ ಸಮೀಕ್ಷಾ ಅವಧಿಯನ್ನು ಈ ಕೆಳಕಂಡಂತೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಆದೇಶ.
No comments:
Post a Comment