Regarding reservation in future promotions for Government employees with visible disabilities in Group-B and Group-A (Junior Grade) cadres.
ಎದ್ದುಕಾಣುವ ಅಂಗವೈಕಲ್ಯವನ್ನುಳ್ಳ ಸರ್ಕಾರಿ ನೌಕರರಿಗೆ ಗ್ರೂಪ್-ಬಿ ಮತ್ತು ಗ್ರೂಪ್-ಎ (ಕಿರಿಯ ಶ್ರೇಣಿ) ವೃಂದಗಳಿಗೆ ಮುಂಬಡ್ತಿಯಲ್ಲಿ ಮೀಸಲಾತಿಯನ್ನು ಕಲ್ಪಿಸುವ ಬಗ್ಗೆ.
ಮೇಲೆ (1)ರಲ್ಲಿ ಓದಲಾದ ದಿನಾಂಕ:28.03.2023ರ ಸರ್ಕಾರಿ ಆದೇಶದಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ಗ್ರೂಪ್-ಡಿ ಮತ್ತು ಗ್ರೂಪ್-ಸಿ ವೃಂದಗಳಿಗೆ ಸೇರಿದ ಹುದ್ದೆಗಳಿಗೆ ನೀಡುವ ಮುಂಬಡ್ತಿಯಲ್ಲಿ ಎದ್ದುಕಾಣುವ ಅಂಗವೈಕಲ್ಯವನ್ನುಳ್ಳ ಸರ್ಕಾರಿ ನೌಕರರಿಗೆ ಶೇಕಡ 4 ರಷ್ಟು ಮೀಸಲಾತಿ ಆಸ್ಪದವನ್ನು ಕಲ್ಪಿಸಲಾಗಿರುತ್ತದೆ.
2. ಮೇಲೆ (2)ರಲ್ಲಿ ಓದಲಾದ ದಿನಾಂಕ:28.11.2023ರ ಸರ್ಕಾರಿ ಆದೇಶದ ಅನುಬಂಧ-2ರಲ್ಲಿ ಎದ್ದು ಕಾಣುವ ಅಂಗವೈಕಲ್ಯವನ್ನುಳ್ಳ ನೌಕರರಿಗೆ ಗ್ರೂಪ್ ಡಿ ಯಿಂದ ಗ್ರೂಪ್-ಸಿ ಮತ್ತು ಗ್ರೂಪ್ ಸಿ ಯಿಂದ ಗ್ರೂಪ್-ಸಿ ಹುದ್ದೆಗಳಿಗೆ ಮುಂಬಡ್ತಿ ನೀಡುವ ಸಂದರ್ಭದಲ್ಲಿ ನಿಗದಿಪಡಿಸಿರುವ 100 ಬಿಂದುಗಳ ರೋಸ್ಮರಿನಲ್ಲಿ 5, 30, 55, 82ನೇ ಬಿಂದುಗಳನ್ನು ಗುರುತಿಸಲಾಗಿದೆ.
3. ರಾಜ್ಯ ಸಿವಿಲ್ ಸೇವೆಗಳಲ್ಲಿನ ಗ್ರೂಪ್-ಡಿ ಯಿಂದ ಗ್ರೂಪ್-ಸಿ ಮತ್ತು ಗ್ರೂಪ್-ಸಿ ಯಿಂದ ಗ್ರೂಪ್-ಸಿ ವೃಂದಗಳಿಗೆ ಸೇರಿದ ಹುದ್ದೆಗಳಿಗೆ ನೀಡುವ ಮುಂಬಡ್ತಿಯಲ್ಲಿ ಎದ್ದುಕಾಣುವ ಅಂಗವೈಕಲ್ಯವನ್ನುಳ್ಳ ಸರ್ಕಾರಿ ನೌಕರರಿಗೆ ಕಲ್ಪಿಸಲಾಗಿರುವ ಶೇಕಡ 4 ರಷ್ಟು ಮೀಸಲಾತಿ ಆಸ್ಪದವನ್ನು ಗ್ರೂಪ್-ಸಿ ಯಿಂದ ಗ್ರೂಪ್-ಬಿ ಮತ್ತು ಗ್ರೂಪ್-ಬಿ ಯಿಂದ ಗ್ರೂಪ್-ಎ (ಕಿರಿಯ ಶ್ರೇಣಿ) ವೃಂದಗಳಿಗೆ ಸೇರಿದ ಎದ್ದುಕಾಣುವ ಅಂಗವೈಕಲ್ಯವನ್ನುಳ್ಳ ಸರ್ಕಾರಿ ನೌಕರರಿಗೂ ಸಹ ವಿಸ್ತರಿಸುವ ಬಗ್ಗೆ ಸರ್ಕಾರ ಕೂಲಂಕಷವಾಗಿ ಪರಿಶೀಲಿಸಿ ಈ ಕೆಳಕಂಡಂತೆ ಆದೇಶಿಸಿದೆ.
ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 12 ಸೆನೆನಿ 2024
, 2:17.05.2025.
4. ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ದಿನಾಂಕ:28.03.2023ರ ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 121 ಸೆನೆನಿ 2020ರಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ಗ್ರೂಪ್-ಡಿ ಯಿಂದ ಗ್ರೂಪ್-ಸಿ ಮತ್ತು ಗ್ರೂಪ್-ಸಿ ಯಿಂದ ಗ್ರೂಪ್-ಸಿ ವೃಂದಗಳಿಗೆ ಸೇರಿದ ಹುದ್ದೆಗಳಿಗೆ ನೀಡುವ ಮುಂಬಡ್ತಿಯಲ್ಲಿ ಎದ್ದುಕಾಣುವ ಅಂಗವೈಕಲ್ಯವನ್ನುಳ್ಳ ಸರ್ಕಾರಿ ನೌಕರರಿಗೆ ಕಲ್ಪಿಸಲಾಗಿರುವ ಶೇಕಡ 4 ರಮ್ಮ ಮೀಸಲಾತಿ ಆಸ್ಪದವನ್ನು ದಿನಾಂಕ:28.03.2023ರ ಆದೇಶದಲ್ಲಿನ ಎಲ್ಲಾ ಷರತ್ತು ಮತ್ತು ಉಪಬಂಧಗಳಲ್ಲಿ ಯಾವುದೇ ಬದಲಾವಣೆ ಇಲ್ಲದೆ (ಅನುಬಂಧವನ್ನು ಹೊರತುಪಡಿಸಿ) ಗ್ರೂಪ್-ಸಿ ಯಿಂದ ಗ್ರೂಪ್-ಬಿ ಮತ್ತು ಗ್ರೂಪ್-ಬಿ ಯಿಂದ ಗ್ರೂಪ್.ಎ (ಕಿರಿಯ ಶ್ರೇಣಿ) ವೃಂದದ ಹುದ್ದೆಗಳಿಗೂ ಸಹ ವಿಸ್ತರಿಸಿ ಆದೇಶಿಸಲಾಗಿದೆ.
No comments:
Post a Comment