KSPSTA

RECENT INFORMATIONS

Search This Blog

Saturday, May 17, 2025

Second PUC Exam-2 Result Statistics 2025

  Dailyguru       Saturday, May 17, 2025
2025 Second PUC Exam-2 Result Statistics.

2025ರ ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶದ ಅಂಕಿಅಂಶಗಳು.

1. ದ್ವಿತೀಯ ಪಿಯುಸಿ ಪರೀಕ್ಷೆ-2ನ್ನು ದಿನಾಂಕ: 24-04-2025 ರಿಂದ 08-05-2025 ರವರೆಗೆ ಒಟ್ಟು 332 ಪರೀಕ್ಷಾ ಕೇಂದ್ರಗಳಲ್ಲಿ ರಾಜ್ಯಾದಂತ ನಡೆಸಲಾಯಿತು.

2. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವನ್ನು ಒಟ್ಟು 19 ಮೌಲ್ಯಮಾಪನ ಕೇಂದ್ರಗಳಲ್ಲಿ ದಿನಾಂಕ 08-05-2025 80 15-05-2025 8 8,312 5៩៨ ៨.

3. ದ್ವಿತೀಯ ಪಿಯುಸಿ ಫಲಿತಾಂಶಕ್ಕಾಗಿ, ವಿದ್ಯಾರ್ಥಿಗಳು https://karresults.nic.in ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದು ಹಾಗೂ ಎಲ್ಲಾ ಕಾಲೇಜುಗಳಲ್ಲಿ ಫಲಿತಾಂಶವನ್ನು ದಿನಾಂಕ 16-05-2025 ರಂದು ಸಂಜೆ 5:30 ಗಂಟೆಗೆ ಪ್ರಕಟಿಸಲಾಗುವುದು.

4. ಫಲಿತಾಂಶವನ್ನು ಉತ್ತಮ ಪಡಿಸಿಕೊಳ್ಳಲು ಪರೀಕ್ಷೆ ಬರೆದ ವಿದ್ಯಾರ್ಥಿಗಳು ಪರೀಕ್ಷೆ-1 ಮತ್ತು ಪರೀಕ್ಷೆ-2 ರಲ್ಲಿ ವಿಷಯವಾರು ಗಳಿಸಿದ ಅತಿಹೆಚ್ಚು ಅಂಕಗಳನ್ನು ಪರಿಗಣಿಸಿ ತುಲನಾತ್ಮಕ ಫಲಿತಾಂಶವನ್ನು https://kseab.karnataka.gov.in ಅಂತರ್ಜಾಲದಲ್ಲಿ ದಿನಾಂಕ 18-05-2025ರಂದು ಪ್ರಕಟಿಸಲಾಗುವುದು.
05. 2025ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 3ರ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.
2025ರ ದ್ವಿತೀಯ ಪಿಯುಸಿ ಪರೀಕ್ಷೆ-3ಕ್ಕೆ ಫಲಿತಾಂಶ ಸುಧಾರಣೆ ಬಯಸಿದ ವಿದ್ಯಾರ್ಥಿಗಳನ್ನು ಮತ್ತು ಖಾಸಗಿ ಅಭ್ಯರ್ಥಿಗಳಾಗಿ ನೋಂದಾಯಿಸಿಕೊಳ್ಳವ ವಿದ್ಯಾರ್ಥಿಗಳನ್ನು ಹೊರತು ಪಡಿಸಿ ಉಳಿದ ವಿದ್ಯಾರ್ಥಿಗಳಿಗೆ ಪರೀಕ್ಷಾ ಶುಲ್ಕ ಇರುವುದಿಲ್ಲ.

7. ಪರೀಕ್ಷೆ-2ರಲ್ಲಿ ಫಲಿತಾಂಶ ಸುಧಾರಣೆ ಬಯಸಿ 71,964 ವಿದ್ಯಾರ್ಥಿಗಳು ಹಾಜರಾಗಿದ್ದು, 41,719 ವಿದ್ಯಾರ್ಥಿಗಳು ಫಲಿತಾಂಶವನ್ನು ಉತ್ತಮ ಪಡಿಸಿಕೊಂದ್ದಾರೆ. ಈ ವಿದ್ಯಾರ್ಥಿಗಳಿಗೆ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ಯಲ್ಲಿ ಉತ್ತಮ RANK ಅನ್ನು ಪಡೆಯಲು ಅನುಕೂಲವಾಗಿರುತ್ತದೆ.

8. ಫಲಿತಾಂಶ ಪೂರ್ಣಗೊಂಡಿರದ ವಿದ್ಯಾರ್ಥಿಗಳಿಗೆ ಪರೀಕ್ಷೆ-2ಕ್ಕೆ ನೋಂದಯಿಸಿಕೊಳ್ಳಲು ಶುಲ್ಕ ವಿನಾಯಿತಿ ನೀಡಿದರಿಂದ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ನೋಂದಣಿಯಾಗಿದ್ದು, ಸದರಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳ ಮೂಲಕ ಪರಿಹಾರ ಬೋಧನೆ ಮಾಡಿದ್ದರಿಂದ ಫಲಿತಾಂಶದಲ್ಲಿ ಪ್ರಗತಿಯಾಗಿರುತ್ತದೆ.

9. 2025ರ ದ್ವಿತೀಯ ಪಿಯುಸಿ ಪರೀಕ್ಷೆ-3ಕ್ಕೆ ಹಾಜರಾಗುವ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ನೋಂದಾಯಿಸಿಕೊಳ್ಳಲು ದಿನಾಂಕ: 26.05.2025 ರವರೆಗೆ ಅವಕಾಶವಿದ್ದು, ದಿನಾಂಕ: 09.06.2025 ರಿಂದ ಪರೀಕ್ಷೆಗಳು ಪ್ರಾರಂಭವಾಗುತ್ತವೆ. ವಿದ್ಯಾರ್ಥಿಗಳು ತಮ್ಮ ಕಾಲೇಜಿನಲ್ಲಿ ನಿಗದಿತ ದಿನಾಂಕದೊಳಗೆ ನಾಂಕದೊ ನೊಂದಯಿಸಿಕೊಂಡು, ಪೂರ್ಣ ಸಿದ್ಧತೆಯೊಂದಿಗೆ ಪರೀಕ್ಷೆಗೆ ಹಾಜರಾಗುವಂತೆ ಪ್ರಾಂಶುಪಾಲರು ಅಗತ್ಯ ಕ್ರಮ ವಹಿಸುವುದು.

ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಆದೇಶ ಡೌನ್ಲೋಡ್ ಮಾಡಿಕೊಳ್ಳಿ.
logoblog

Thanks for reading Second PUC Exam-2 Result Statistics 2025

Previous
« Prev Post

No comments:

Post a Comment