Free Coaching Exam Key Answers 2025
FC:Exam Key Answer:
✍🏻📋✍🏻📋✍🏻📋✍🏻📋
⚫ ಸಮಾಜ ಕಲ್ಯಾಣ (IGCCD) ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ವತಿಯಿಂದ SC, ST & OBC ಅಭ್ಯರ್ಥಿಗಳಿಗೆ Group-C, Banking, SSC & RRB ಪರೀಕ್ಷೆಗಳಿಗೆ Free Coaching ನೀಡಲು ಅಭ್ಯರ್ಥಿಗಳ ಆಯ್ಕೆಗಾಗಿ 2025 ಜುಲೈ-19 ರಂದು ನಡೆದಿದ್ದ ಪ್ರವೇಶ ಪರೀಕ್ಷೆ (Free Coaching Exam) ಯ Official Key Answers ಇದೀಗ ಪ್ರಕಟಗೊಂಡಿವೆ.
ಪ್ರಕಟಣೆ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದಿಂದ ಗ್ರೂಪ್-ಸಿ, ಬ್ಯಾಂಕಿಂಗ್, ಎಸ್.ಎಸ್.ಸಿ ಮತ್ತು ಆರ್.ಆರ್.ಬಿ ಪ್ರವೇಶ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳನ್ನು ನಿಯೋಜಿಸುವ ಸಂಬಂಧದ ಪ್ರವೇಶ ಪರೀಕ್ಷೆಯ ಕೀ ಉತ್ತರಗಳನ್ನು ಪ್ರಕಟಿಸುವ ಬಗ್ಗೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದಿಂದ ಗ್ರೂಪ್-ಸಿ. ಬ್ಯಾಂಕಿಂಗ್, ಎಸ್.ಎಸ್.ಸಿ ಮತ್ತು ಆರ್.ಆರ್.ಬಿ ಪ್ರವೇಶ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳನ್ನು ನಿಯೋಜಿಸುವ ಸಂಬಂಧದ ಪ್ರವೇಶ ಪರೀಕ್ಷೆಯನ್ನು ದಿನಾಂಕ:19.07.2025 ರಂದು ನಡೆಸಲಾಗಿದ್ದು, ಸದರಿ ಪರೀಕ್ಷೆಯ ಕೀ ಉತ್ತರಗಳನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ದಿನಾಂಕ:21-07-2025 ರಂದು ಪ್ರಕಟಿಸಲಾಗಿರುತ್ತದೆ.
ಪ್ರಕಟಿತ ಕೀ ಉತ್ತರಗಳಿಗೆ ಆಕ್ಷೇಪಣೆಗಳಿದ್ದಲ್ಲಿ, ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಒದಗಿಸಲಾದ ಆನ್ಲೈನ್ ಪೋರ್ಟಲ್ https://cetonline.karnataka.gov.in/keaobjections/forms/login.aspx ಲಿಂಕ್ ಮೂಲಕ ಮಾತ್ರವೇ ದಿನಾಂಕ:24.07.2025 ಸಂಜೆ 5.00 ಗಂಟೆಯೊಳಗೆ ಸಲ್ಲಿಸಬಹುದಾಗಿರುತ್ತದೆ.
ಆಕ್ಷೇಪಣೆಗಳನ್ನು ಸಲ್ಲಿಸುವ ಸಂದರ್ಭದಲ್ಲಿ ಪತ್ರಿಕೆಯ ವಿವರ, ಪರೀಕ್ಷಾ ದಿನಾಂಕ, ವರ್ಷನ್ ಕೋಡ್, ಪ್ರಶ್ನೆ ಸಂಖ್ಯೆ ಹಾಗೂ ಪೂರಕ ದಾಖಲೆಗಳನ್ನು PDF ರೂಪದಲ್ಲಿ ಸಲ್ಲಿಸಬೇಕು. ಪ್ರಶ್ನೆ ಸಂಖ್ಯೆ ಅಥವಾ ವರ್ಷನ್ ಕೋಡ್ ನಮೂದಿಸದೇ ಇರುವ ಅಥವಾ ಅಪೂರ್ಣ/ಆಧಾರರಹಿತವಾಗಿರುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ.
ವಿಷಯ ತಜ್ಞರ ಸಮಿತಿಯು ಪರಿಶೀಲಿಸಿ ತೀರ್ಮಾನಿಸುವ ಕೀ ಉತ್ತರಗಳು ಅಂತಿಮವಾಗಿರುತ್ತವೆ.
ಆಕ್ಷೇಪಣೆಗಳಿದ್ದರೆ 2025 ಜುಲೈ-24 ರೊಳಗಾಗಿ ಈ ಕೆಳಗಿನ ಲಿಂಕ್ ಮೂಲಕ ಸಲ್ಲಿಸಬಹುದು.!!
No comments:
Post a Comment