Hedding : Regarding the scheduling of academic sessions and vacation periods for the academic year 2025-26 for government, aided and unaided primary and high schools of the state curriculum in the state...
ರಾಜ್ಯದಲ್ಲಿ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ,ಪ್ರೌಢ ಶಾಲೆಗಳಿಗೆ 2025-26 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಶೈಕ್ಷಣಿಕ ಅವಧಿಗಳು ಮತ್ತು ರಜಾ ಅವಧಿಗಳನ್ನು ನಿಗದಿಪಡಿಸುವ ಬಗ್ಗೆ...
2024-25ನೇ ಸಾಲಿನ ಚಟುವಟಿಕೆಗಳು ಮುಕ್ತಾಯವಾಗುತ್ತಲ್ಲಿದ್ದು ಮುಂದಿನ 2025-26ನೇ ಸಾಲಿನ ಶೈಕ್ಷಣಿಕ ಸಾಲಿನ ಚಟುವಟಿಕೆಗಳನ್ನು ಪ್ರಾರಂಭಿಸಲು ಸದರಿ ಸಾಲಿನಲ್ಲಿ ಎಂದಿನಂತೆ ಅಗತ್ಯ ಪೂರ್ವಸಿದ್ಧತೆಗಾಗಿ ದಿನಾಂಕ: 29.05.2025 ರಿಂದ ಶಾಲೆ ಪ್ರಾರಂಭಿಸಲು ಸೂಚಿಸಲಾಗಿದೆ. ಅದರಂತೆ ವಾರ್ಷಿಕ ಶೈಕ್ಷಣಿಕ ಕ್ರಿಯಾಯೋಜನೆಯ ವೇಳಾಪಟ್ಟಿಯನ್ನು ನಿಗಧಿಪಡಿಸಲಾಗಿದೆ. ಪ್ರಯುಕ್ತ ರಾಜ್ಯದ ಎಲ್ಲಾ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಏಕರೂಪದ ಶೈಕ್ಷಣಿಕ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಲು ಸಹಾಯವಾಗುವಂತೆ ಒಟ್ಟು ವಾರ್ಷಿಕ ದಿನಗಳಲ್ಲಿ ಲಭ್ಯವಾಗುವ ಶೈಕ್ಷಣಿಕ ಚಟುವಟಿಕೆ ಅವಧಿಗಳು, ಕರ್ತವ್ಯದ ದಿನಗಳು ಮತ್ತು ರಜಾ ದಿನಗಳನ್ನಾಧರಿಸಿ ಅದಕ್ಕನುಗುಣವಾಗಿ ವಾರ್ಷಿಕ ಕಾರ್ಯಸೂಚಿಯನ್ನು ಈ ಕೆಳಕಂಡಂತೆ ನಿಗದಿಪಡಿಸಲಾಗಿದ್ದು, ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳಲ್ಲಿ ಅನುಷ್ಠಾನಗೊಳಿಸಿ ಮತ್ತು ಅನುಪಾಲನೆ ಮಾಡಲು ತಿಳಿಸಿದೆ...
2024-25 ನೇ ಶೈಕ್ಷಣಿಕ ಸಾಲಿನ ಮುಕ್ತಾಯ ಹಂತದಲ್ಲಿ ನಿರ್ವಹಿಸಬೇಕಾದ ಅಂಶಗಳ ಕುರಿತು
1) 1 ರಿಂದ 9ನೇ ತರಗತಿವರೆಗೆ ಮೌಲ್ಯಾಂಕನ ಪರೀಕ್ಷೆಗಳ ಮೌಲ್ಯಮಾಪನವನ್ನು ಪೂರ್ಣಗೊಳಿಸಿ ಫಲಿತಾಂಶವನ್ನು ಶೇ 100 ಅಂಕಗಳಿಗೆ ಕ್ರೋಢೀಕರಿಸಿ ನಿಯಮಾನುಸಾರ ಗ್ರೇಡ್ ದಾಖಲಿಸಿ SATS ನಲ್ಲಿ ಪ್ರಾಥಮಿಕ ಶಾಲೆಗಳಿಗೆ ಸಂಬಂಧಿಸಿದಂತೆ ದಿನಾಂಕ:07-04-2025 ರೊಳಗೆ ಹಾಗೂ ಪ್ರೌಢಶಾಲೆಗಳಿಗೆ ಸಂಬಂಧಿಸಿದಂತೆ ದಿನಾಂಕ:08-04-2025ರೊಳಗೆ ಇಂದೀಕರಿಸತಕ್ಕದ್ದು,
2) 5, 8 ಮತ್ತು 9ನೇ ತರಗತಿಯ SA-2 ಮೌಲ್ಯಾಂಕನ ಸೇರಿದಂತೆ ಉಳಿದ 1 ರಿಂದ 9 ನೇ ತರಗತಿಗಳ ಫಲಿತಾಂಶವನ್ನು ನಿಯಮಾನುಸಾರ ವಿಶ್ಲೇಷಿಸಿ, ನಿಗದಿಪಡಿಸಿದಂತೆ ದಿನಾಂಕ 08.04.2025 ರಂದು ಪ್ರಾಥಮಿಕ ಶಾಲಾ ಹಂತದಲ್ಲಿ ಹಾಗೂ ದಿನಾಂಕ 09.04.2025 ರಂದು ಪ್ರೌಢಶಾಲಾ ಹಂತದಲ್ಲಿ ಎರಡನೇ ಸಮುದಾಯ ದತ್ತ ಶಾಲೆ/ಪೋಷಕರ ಸಭೆ ಕರೆದು ಪ್ರಕಟಣೆ ಮಾಡುವುದು.
3) ದಿನಾಂಕ:14-04-2025 ರಂದು ಡಾ|| ಬಿ.ಆರ್ ಅಂಬೇಡ್ಕರ್ ರವರ ಜಯಂತಿಯನ್ನು ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ಹಾಗೂ ಎಸ್.ಡಿ.ಎಂ.ಸಿ/ಖಾಸಗಿ ಶಾಲೆಗಳಲ್ಲಿ ಸಂಬಂಧಿಸಿದ ಆಡಳಿತ ಮಂಡಳಿಯವರು ಮತ್ತು ಮಕ್ಕಳೊಂದಿಗೆ ಉತ್ತಮ ಪೂರ್ವ ತಯಾರಿಯೊಂದಿಗೆ ಆಚರಿಸತಕ್ಕದ್ದು.
4) ಶಾಲಾ ಸ್ಥಳೀಯ ರಜೆಗಳಿಗೆ ಸಂಬಂಧಿಸಿದಂತೆ ಶಾಲಾವಾರು ನಿರ್ದಿಷ್ಟಪಡಿಸಿದ ದಿನಾಂಕಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ಪೂರ್ವಭಾವಿಯಾಗಿ ಜೂನ್-2025 'ರ ಮೊದಲನೇ ವಾರದಲ್ಲಿ ಅನುಮೋದನೆ ನೀಡುವುದು. ಅನುಮೋದಿಸಿದ ದಿನಾಂಕಗಳಿಗೆ ಮಾತ್ರ ಸ್ಥಳೀಯ ರಜೆ ಹೊಂದುವುದು.
5) 2025-26 ನೇ ಸಾಲಿಗೆ ಸರ್ಕಾರಿ ಶಾಲೆಗಳ 1 ರಿಂದ 10ನೇ ತರಗತಿಯ ಎಲ್ಲಾ ಮಕ್ಕಳಿಗೆ 02 ಜೊತೆ ಉಚಿತ ಸಮವಸ್ತ್ರ, ಮತ್ತು ಪಠ್ಯಪುಸ್ತಕ ಹಾಗೂ ಖಾಸಗಿ ಶಾಲೆಗಳಿಗೆ ಪಠ್ಯಪುಸ್ತಕಗಳು ಸಂಬಂಧಿಸಿದ ತಾಲ್ಲೂಕುಗಳಿಗೆ ಸರಬರಾಜು ಆದ ತಕ್ಷಣ ಸಂಬಂಧಿಸಿದ ಶಾಲೆಗಳ ಮುಖ್ಯೋಪಾಧ್ಯಾಯರ ಮುಖಾಂತರ ಮಕ್ಕಳಿಗೆ ತಲುಪಿಸುವ ಕುರಿತು ಕ್ರಮವಹಿಸುವುದು.
6) ದಿನಾಂಕ:11-04-2025 ರಿಂದ ದಿನಾಂಕ:28-05-2025 ರವರೆಗೆ ಶಾಲೆಗಳಿಗೆ ಬೇಸಿಗೆ ರಜೆ ಘೋಷಣೆಯಾಗಿರುವುದರಿಂದ ಶಾಲಾ ಮುಖ್ಯಸ್ಮರು ಶಾಲಾ ದಾಸ್ತಾನು ಮತ್ತು ದಾಖಲೆಗಳನ್ನು ಹಾಗೂ ಅಕ್ಷರ ದಾಸೋಹ ಕಾರ್ಯಕ್ರಮದಡಿ ಮಧ್ಯಾಹ್ನದ ಬಿಸಿಯೂಟದ ಸಾಮಗ್ರಿಗಳನ್ನು V ಸುರಕ್ಷಿತವಾಗಿ ಸಂಗ್ರಹಿಸಿಡುವುದು ಹಾಗೂ ಬರಪೀಡಿತ ತಾಲ್ಲೂಕುಗಳಲ್ಲಿ ರಜಾ ಅವಧಿಯಲ್ಲಿ ಮಕ್ಕಳಿಗೆ ಬಿಸಿ ಊಟ ನೀಡುವ ಕುರಿತು ಸಂಬಂಧಿಸಿದ ನಿರ್ದೇಶನಾಲಯದಿಂದ ನೀಡುವ ಸೂಚನೆಗಳಂತೆ ಕ್ರಮವಹಿಸುವುದು. ಒಂದು ವೇಳೆ ಈ ಅವಧಿಯಲ್ಲಿ ಅಧಿಕೃತ ಚುನಾವಣಾ"' ಕಾರ್ಯಕ್ಕೆ ಮತಗಟ್ಟೆ ಕೇಂದ್ರಗಳನ್ನಾಗಿ ಶಾಲೆಗಳನ್ನು ಬಳಸಲು ಸಂಬಂಧಿಸಿದ
2025-26ನೇ ಶೈಕ್ಷಣಿಕ ಸಾಲಿನಲ್ಲಿ ನಿರ್ವಹಿಸಬೇಕಾದ ಅಂಶಗಳ ಕುರಿತು
1. ದಿನಾಂಕ:29-05-2025ರಿಂದ ಶಾಲೆಗಳು ಪ್ರಾರಂಭವಾಗಲಿದ್ದು, ಮುಖ್ಯ ಶಿಕ್ಷಕರು ಮತ್ತು ಶಿಕ್ಷಕರು ಸದರಿ ದಿನದಂದು ಶಾಲೆಗಳಿಗೆ ಹಾಜರಾಗಿ ಅಗತ್ಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳುವುದು ವಿದ್ಯಾರ್ಥಿಗಳ ಪ್ರವೇಶಾತಿಯನ್ನು/ದಾಖಲಾತಿಯನ್ನು 20:30.05.2025 ರಿಂದ ಪ್ರಾರಂಭೋತ್ಸವದೊಂದಿಗೆ ಆರಂಭಿಸಿ ದಿನಾಂಕ : 30.06.2025 ರಂದು ಮುಕ್ತಾಯಗೊಳಿಸತಕ್ಕದ್ದು కాలా
2. ಕೆಲವು ಮಕ್ಕಳು ನಿರಂತರವಾಗಿ ಶಾಲೆಗೆ ಗೈರುಹಾಜರಾಗುತ್ತಿರುವುದು ಮತ್ತು ಶಾಲೆಯನ್ನು ಅರ್ಧದಲ್ಲಿಯೇ ಬಿಡುವ ಮಕ್ಕಳನ್ನು ಕಡ್ಡಾಯವಾಗಿ ಹಾಜರಾತಿ ಅಧಿಕಾರಿಯು (ಶಿಕ್ಷಣ ಸಂಯೋಜಕರು) CRP & BRP ಗಳೊಂದಿಗೆ ಸಂಪರ್ಕದಲ್ಲಿದ್ದು ದಾಖಲಾತಿ ಅಂದೋಲನದ ಮುಖಾಂತರ ವ್ಯಾಪಕ ಪ್ರಚಾರ ಕೈಗೊಂಡು ಶಾಲಾ ಮುಖ್ಯವಾಹಿನಿಗೆ ತರುವುದು.
3. నోమనా రజ్ బోణళయన సంబంధినద తిక్షణ సంస్నగళు కమ్మ వ్యాప్తియ జిల్లా. ಉಪನಿರ್ದೇಶಕರು (ಆಡಳಿತ) ರವರಿಗೆ ಸಲ್ಲಿಸಿದಲ್ಲಿ ಈ ಬಗ್ಗೆ, ಆಯಾ ಉಪನಿರ್ದೇಶಕರು (ಆಡಳಿತ) ರವರು ಈ ಕುರಿತು ಪರಿಶೀಲಿಸಿ ನಿರ್ಧರಿಸುವುದು ಸದರಿ ಡಿಸೆಂಬರ್ ಮಾಹೆಯಲ್ಲಿ ನೀಡುವ ಕ್ರಿಸ್ ಮಸ್ ರಜಾ ಅವಧಿಯನ್ನು ಅಕ್ಟೋಬರ್ ಮಾಹೆಯ ಮಧ್ಯಂತರ ರಜೆಯಲ್ಲಿ ಕಡಿತಗೊಳಿಸಿ ಸರಿದೂಗಿಸಿಕೊಳ್ಳಲು ಕ್ರಮವಹಿಸತಕ್ಕದ್ದು.
4. ರಾಜ್ಯ/ಜಿಲ್ಲಾ ಕಛೇರಿಗಳಿಂದ ನಿಯೋಜಿಸಿದ ಜಿಲ್ಲಾ ಮತ್ತು ತಾಲ್ಲೂಕು ಶೈಕ್ಷಣಿಕ ಉಸ್ತುವಾರಿ ನೋಡಲ್ ಅಧಿಕಾರಿಗಳು, ಜಿಲ್ಲಾ ಹಂತದಲ್ಲಿ ಉಪನಿರ್ದೇಶಕರು (ಆಡಳಿತ) ಮತ್ತು (ಅಭಿವೃದ್ಧಿ) ರವರುಗಳು, ಬ್ಲಾಕ್ ಹಂತದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ, ಕ್ಲಸ್ಟರ್ ಹಂತದಲ್ಲಿ ಸಿ.ಆರ್.ಪಿಗಳು, ತಮ್ಮ ತಮ್ಮ ವ್ಯಾಪ್ತಿಗನುಗುಣವಾಗಿ ಕ್ರಿಯಾಶೀಲ ಮೇಲ್ವಿಚಾರಣೆ ಮತ್ತು ಶೈಕ್ಷಣಿಕ ಉಸ್ತುವಾರಿ ಕ್ರಿಯಾ ಯೋಜನೆಯನ್ನು ಈ ಮುಂದೆ ನೀಡಲಾಗುವ ಶೈಕ್ಷಣಿಕ ಮಾರ್ಗದರ್ಶಿಯಲ್ಲಿ ತಿಳಿಸುವಂತೆ ತಯಾರಿಸಿಕೊಂಡು ಶಾಲೆಗಳ ಪ್ರಾರಂಭಕ್ಕೆ ಪೂರ್ವ ತಯಾರಿ ಮಾಡಿಕೊಳ್ಳುವುದು ಶಾಲೆಗಳ ಪ್ರಾರಂಭದ ಸಮಯದಲ್ಲಿ ಇರುವ ಇಲಾಖಾ ಪ್ರೋತ್ಸಾಹದಾಯಕ ಯೋಜನೆಗಳಾದ PM ಪೋಷಣ್, ಕ್ಷೀರ ಭಾಗ್ಯ, ಹಾಗೂ ಪೂರೈಸಲಾಗುವ ಸಮವಸ್ತ್ರ ಪಠ್ಯಪುಸ್ತಕ ವಿತರಣೆಗೆ ಕ್ರಮವಹಿಸುವುದು ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಅಭಿವೃದ್ಧಿಪಡಿಸಲು ಮಿಂಚಿನ ಸಂಚಾರ ಕೈಗೊಂಡು ಉಸ್ತುವಾರಿ ಮಾಡುವುದು.
5. ರಾಷ್ಟ್ರೀಯ ಹಬ್ಬಗಳಾದ ಗಣರಾಜ್ಯೋತ್ಸವ ಸ್ವಾತಂತ್ರ್ಯ ದಿನಾಚರಣೆ ಹಾಗೂ ನಾಡ ಹಬ್ಬವಾದ ಕರ್ನಾಟಕ ರಾಜ್ಯೋತ್ಸವ ಮತ್ತು ಇತರೆ ಪ್ರಮುಖ ಜಯಂತಿಗಳನ್ನು ಕಡ್ಡಾಯವಾಗಿ ಆಯಾ ದಿನಗಳಂದು ಗೌರವಪೂರ್ವಕವಾಗಿ ಆಚರಿಸತಕ್ಕದ್ದು.
4 6. ನಿಗಧಿಪಡಿಸಿದ ಶೈಕ್ಷಣಿಕ ಕರ್ತವ್ಯದ ಅವಧಿಗಳು ಕಡಿಮೆಯಾಗದಂತೆ ಮುಷ್ಕರ ಮಳೆಗಾಗಿ, ಇನ್ನಿತರೆ ಅನಿರೀಕ್ಷಿತ ಕಾರಣಗಳಿಂದಾಗಿ ಶಾಲೆಗೆ ರಜೆ ಘೋಷಣೆಯಾದಲ್ಲಿ ಆ ಅವಧಿಯ ಶಾಲಾ ಕರ್ತವ್ಯದ ದಿನಗಳನ್ನು ಮುಂದಿನ ರಜಾ ದಿನಗಳಲ್ಲಿ ಪೂರ್ಣದಿನದ ಶಾಲೆಗಳನ್ನು ನಡೆಸಿ, ಶಾಲಾ ಕರ್ತವ್ಯದ ದಿನಗಳನ್ನು ಸರಿದೂಗಿಸಿಕೊಳ್ಳಲು ಉಪನಿರ್ದೇಶಕರು/ಕ್ಷೇತ್ರ ಶಿಕ್ಷಣಾಧಿಕಾರಿಗಳು ಕ್ರಮವಹಿಸುವುದು.
7. ಪರೀಕ್ಷಾ ದಿನಗಳು, ಮೌಲ್ಯಾಂಕನ ದಿನಗಳು, ಹಾಗೂ ಪೂರಕ ಶೈಕ್ಷಣಿಕ ಚಟುವಟಿಕೆ ನಡೆಸುವ ದಿನಗಳನ್ನು ಕೂಡ ಶಾಲಾ ಕರ್ತವ್ಯದ ದಿನವೆಂದು ನಿಗದಿತ ಅವಧಿಗಳಲ್ಲಿ ಪರಿಗಣಿಸುವುದು.
8. 2025-26 ನೇ ಸಾಲಿನ ವಾರ್ಷಿಕ ಶೈಕ್ಷಣಿಕ ಮಾರ್ಗಸೂಚಿಯನ್ನು ಸಿದ್ಧಪಡಿಸಿ ನಂತರ ಪೂರೈಸಲಾಗುವುದು. ಅದರಂತೆ ಶಾಲಾ/ಕ್ರಸ್ಟರ್/ತಾಲ್ಲೂಕು ಹಾಗೂ ಜಿಲ್ಲಾ ಹಂತಗಳಲ್ಲಿ ಕ್ರಿಯಾ ಯೋಜನೆ ರೂಪಿಸಿಕೊಂಡು
CLICK HERE TO DOWNLOAD THE PDF FILE 🗄️🗃️🗃️🗃️
CLICK HERE TO DOWNLOAD THE PDF FILE 🗄️🗃️🗃️🗃️...
No comments:
Post a Comment