KSPSTA

RECENT INFORMATIONS

Search This Blog

Sunday, September 28, 2025

MINORITIES SWAVALAMBI SARATHI SCHEME

  Dailyguru       Sunday, September 28, 2025

 MINORITIES SWAVALAMBI SARATHI SCHEME 


ಸದರಿ ಯೋಜನೆಯಡಿ ಬ್ಯಾಂಕುಗಳಿಂದ ಮಂಜೂರಾತಿ ನೀಡಿದ / ಪಡೆದ ಟ್ಯಾಕ್ಸಿ /ಸರಕು ವಾಹನಗಳನ್ನು ಖರೀದಿಸಲು ಪ್ರತಿ ಫಲಾನುಭವಿಗೆ ವಾಹನದ ಮೌಲ್ಯದ ಶೇ 50 ರಷ್ಟು ಅಥವಾ ಗರಿಷ್ಠ ರೂ. 3,00,000/- ರ ವರೆಗೆ, ಪ್ರಯಾಣಿಕ ಆಟೋ ರಿಕ್ಷಾ ಖರೀದಿಸಲು ಗರಿಷ್ಠ ರೂ. 75,000/- ಸಹಾಯಧನ ನೀಡಲಾಗುತ್ತದೆ. ವಾಹನದ ಉಳಿದ ಮೊತ್ತಕ್ಕೆ ಬ್ಯಾಂಕ್ ಸಾಲ ಪಡೆದುಕೊಂಡ ಬಗ್ಗೆ ಬ್ಯಾಂಕ್ ಪತ್ರವನ್ನು ಸಲ್ಲಿಸಬೇಕು.


ಅರ್ಹತೆ :



ಅರ್ಜಿದಾರರು ಕರ್ನಾಟಕ ರಾಜ್ಯದ ಧಾರ್ಮಿಕ ಅಲ್ಪಸಂಖ್ಯಾತರಿಗೆ ಸೇರಿದವರಾಗಿರಬೇಕು.

ಅರ್ಜಿದಾರರು ಕರ್ನಾಟಕದ ಶಾಶ್ವತ ನಿವಾಸಿಯಾಗಿರಬೇಕು.

ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ನಡುವೆ ಇರಬೇಕು.

ಎಲ್ಲಾ ಮೂಲಗಳಿಂದ ಬರುವ ವಾರ್ಷಿಕ ಅರ್ಜಿದಾರರ ಆದಾಯವು ರೂ. 6,00,000/- ಕ್ಕಿಂತ ಕಡಿಮೆ ಇರಬೇಕು.

ಅರ್ಜಿದಾರರು ಪ್ರಾದೇಶಿಕ ಸಾರಿಗೆ ಅಧಿಕಾರಿಯಿಂದ ನೀಡಲಾದ ಚಾಲನಾ ಪರವಾನಗಿ ಹೊಂದಿರಬೇಕು

ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ಕೇಂದ್ರ/ರಾಜ್ಯ ಸರ್ಕಾರಿ ಉದ್ಯೋಗಿಯಾಗಬಾರದು.

ಕಳೆದ 05 ವರ್ಷಗಳಲ್ಲಿ ಅರ್ಜಿದಾರ ಅಥವಾ ಅವನ/ಅವಳ ಕುಟುಂಬದ ಸದಸ್ಯರು ಸರ್ಕಾರದ / ನಿಗಮದ ಯಾವುದೇ ಇತರ ಯೋಜನೆಯಡಿಯಲ್ಲಿ(ಅರಿವು ಮತ್ತು ವಿದೇಶ ವಿದ್ಯಾಭ್ಯಾಸ ಸಾಲ ಯೋಜನೆ ಹೊರತುಪಡಿಸಿ) ಸಾಲ ಸೌಲಭ್ಯಗಳನ್ನು ಪಡೆದಿರಬಾರದು.


ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು


ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಜಾತಿ/ಅಲ್ಪಸಂಖ್ಯಾತ ಪ್ರಮಾಣಪತ್ರ


ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಆದಾಯ ಪ್ರಮಾಣಪತ್ರ


ಆಧಾರ್ ಕಾರ್ಡ್ ಪ್ರತಿ (ನಿವಾಸದ ಪುರಾವೆ)


ವಾಹನ ಚಾಲನಾ ಪರವಾನಗಿ ಪ್ರತಿ


ಬ್ಯಾಂಕ್ ಪಾಸ್ ಬುಕ್ ಪ್ರತಿ


ವಾಹನದ ಅಂದಾಜು ದರಪಟ್ಟಿ


ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಜಾತಿ/ಅಲ್ಪಸಂಖ್ಯಾತ ಪ್ರಮಾಣಪತ್ರ


ಸ್ವಯಂ ಘೋಷಣೆ ಪತ್ರ



https://kmdconline.karnataka.gov.in/Portal/home

logoblog

Thanks for reading MINORITIES SWAVALAMBI SARATHI SCHEME

Previous
« Prev Post

No comments:

Post a Comment