Hedding : Regarding the release of grant from the Commission's deposit account to the District Collectors to pay the amount of honorarium to the surveyors and supervisors participating in the social and educational survey...
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವ ಸಮೀಕ್ಷಾದಾರರಿಗೆ ಮತ್ತು ಮೇಲ್ವಿಚಾರಕರಿಗೆ ಗೌರವಧನದ ಮೊತ್ತವನ್ನು ಪಾವತಿಸಲು ಆಯೋಗದ ಠೇವಣಿ ಖಾತೆಯಿಂದ ಜಿಲ್ಲಾಧಿಕಾರಿಗಳಿಗೆ ಅನುದಾನ ಬಿಡುಗಡೆ ಮಾಡುವ ಕುರಿತು...
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಉಲ್ಲೇಖ(1)ರ ಆದೇಶದನ್ವಯ ರಾಜ್ಯಾದ್ಯಂತ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ದಿನಾಂಕ:22.09.2025 ರಿಂದ 07.10.2025ರ ವರೆಗೆ ಕೈಗೊಳ್ಳಲಾಗುತ್ತಿದೆ. ಈಗಾಗಲೇ ಜಿಲ್ಲೆಗಳಲ್ಲಿ ಸಮೀಕ್ಷಾ ಕಾರ್ಯವನ್ನು ಪ್ರಾರಂಭಿಸಿದ್ದು ಸಮೀಕ್ಷೆಯ ಕಾರ್ಯ ಪ್ರಗತಿಯಲ್ಲಿದೆ.
ಉಲ್ಲೇಖ (2)ರ ಆದೇಶದಲ್ಲಿ ಆಯೋಗದಿಂದ ಕೈಗೊಳ್ಳಲಾಗುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯಕ್ಕೆ ಆರ್ಥಿಕ ಇಲಾಖೆಯಿಂದ ಪೂರಕ ಆಯವ್ಯಯ-2 ರಲ್ಲಿ ಅನುದಾನ ಒದಗಿಸುವ ಷರತ್ತುಗಳಿಗೆ ಒಳಪಟ್ಟು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧೀನದಲ್ಲಿ ಬರುವ ನಿಗಮಗಳ ಪಿ.ಡಿ. ಖಾತೆಗಳಲ್ಲಿ ಲಭ್ಯವಿರುವ ರೂ.348.36 ಕೋಟಿಗಳನ್ನು ಸಮೀಕ್ಷೆಯ ಉದ್ದೇಶಕ್ಕೆ ಬಳಸಿಕೊಳ್ಳಲು ಅನುಮೋದನೆ ನೀಡಿ ಆದೇಶಿಸಲಾಗಿದೆ.
ಉಲ್ಲೇಖ (3)ರ ಆದೇಶದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ದಿನಾಂಕ:22.09.2025 ರಿಂದ 07.05.2025ರ ವರೆಗೆ ಕೈಗೊಳ್ಳಲಾಗುವ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವ ಸಮೀಕ್ಷಾದಾರರು ಮತ್ತು ಮೇಲ್ವಿಚಾರಕರಿಗೆ ಈ ಕೆಳಕಂಡಂತೆ ಗೌರವಧನವನ್ನು ನಿಗದಿಪಡಿಸಿ ಆದೇಶಿಸಿದೆ.
ಸರ್ಕಾರದ ಕಾರ್ಯದರ್ಶಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರ ಸೂಚನೆಯನ್ವಯ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವ 1,20,728 ಸಮೀಕ್ಷಾದಾರರಿಗೆ (GBA ಹೊರತುಪಡಿಸಿ) ಮೊದಲನೇ ಕಂತಿನಲ್ಲಿ ಗೌರವಧನ ತಲಾ ರೂ.5000/- ಗಳಂತೆ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಒಟ್ಟು ರೂ. 60,36,40,000/- (ರೂಪಾಯಿ ಅರವತ್ತು ಕೋಟಿ ಮೂವತ್ತಾರು ಲಕ್ಷದ ನಲವತ್ತು ಸಾವಿರಗಳು ಮಾತ್ರ) ಗಳನ್ನು ಬಿಡುಗಡೆ ಮಾಡಲು ತೀರ್ಮಾನಿಸಿದೆ. ಅದರಂತೆ ಈ ಆದೇಶ.
CLICK HERE TO DOWNLOAD THE PDF FILE 🗄️🗃️🗃️🗃️...
No comments:
Post a Comment