Hedding : Applications are invited for free education for the 2026-27 academic year at Alvas Kannada Medium School...
ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯಲ್ಲಿ ಸಂಪೂರ್ಣ ಉಚಿತ ಶಿಕ್ಷಣ: ಫಲಾನುಭವಿ ವಿದ್ಯಾರ್ಥಿಗಳಿಗಾಗಿ ಅರ್ಜಿ ಆಹ್ವಾನ
ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯಲ್ಲಿ ಉಚಿತ ಶಿಕ್ಷಣವನ್ನು 6, 7, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಲ್ಲಿ ನೀಡಲಿದ್ದು, ಈ ತರಗತಿಗಳಿಗೆ ಪ್ರವೇಶ ಪಡೆಯಲು ಬಯಸುವವರು, ಈಗ ಅರ್ಜಿ ಸಲ್ಲಿಸಿ, ಪ್ರವೇಶ ಪ್ರಕ್ರಿಯೆಯ ಆಯ್ಕೆ ಪರೀಕ್ಷೆಗೆ ಹಾಜರಾಗಬೇಕಾಗುತ್ತದೆ. .
ಮೂಡುಬಿದಿರೆಯ ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯಲ್ಲಿ 2025-26 ನೇ ಶೈಕ್ಷಣಿಕ ವರ್ಷದ ಸಂಪೂರ್ಣ ಉಚಿತ ಶಿಕ್ಷಣ ಸೌಲಭ್ಯದಡಿಯಲ್ಲಿ ಉಚಿತ ಶಿಕ್ಷಣ ಪಡೆಯಲು ಬಯಸುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳ ಪೋಷಕರು ಈ ಮಾಹಿತಿಗಳನ್ನು ಓದಿಕೊಂಡು ಅರ್ಜಿ ಸಲ್ಲಿಸಿ.
ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯಲ್ಲಿ 2025-26 ನೇ ಶೈಕ್ಷಣಿಕ ವರ್ಷದಲ್ಲಿ 6, 7, 8 ಮತ್ತು 9ನೇ ತರಗತಿಗಳಿಗೆ ಉಚಿತ ಶಿಕ್ಷಣ ಸೌಲಭ್ಯದಡಿಯಲ್ಲಿ ಉಚಿತ ಶಿಕ್ಷಣ ಪಡೆಯಬಹುದಾಗಿದೆ. ಈ ಸೌಲಭ್ಯಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
6ನೇ ತರಗತಿಗೆ ಉಚಿತ ಶಿಕ್ಷಣಕ್ಕಾಗಿ 5 ತರಗತಿ ಓದುತ್ತಿರುವವರು, 7ನೇ ತರಗತಿಗೆ ಉಚಿತ ಶಿಕ್ಷಣ ಸೌಲಭ್ಯದಡಿ ಪ್ರವೇಶ ಪಡೆಯಲು 6ನೇ ತರಗತಿ ಓದುತ್ತಿರುವವರು, 8ನೇ ತರಗತಿಗೆ ಉಚಿತ ಶಿಕ್ಷಣ ಸೌಲಭ್ಯದಡಿ ಪ್ರವೇಶ ಪಡೆಯಲು 7ನೇ ತರಗತಿಯಲ್ಲಿ ಪ್ರಸ್ತುತ ವ್ಯಾಸಂಗ ಮಾಡುತ್ತಿರಬೇಕು, 9ನೇ ತರಗತಿಗೆ ಉಚಿತ ಶಿಕ್ಷಣ ಸೌಲಭ್ಯದಡಿ ಪ್ರವೇಶ ಪಡೆಯಲು 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರಬೇಕು.
ಶೈಕ್ಷಣಿಕ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಪಡೆಯಲು ಇದೊಂದು ಸುವರ್ಣಾವಕಾಶವಾಗಿದೆ. ಆಸಕ್ತ ವಿದ್ಯಾರ್ಥಿಗಳು www.alvasschools.com ಈ ಅಂತರ್ಜಾಲದಲ್ಲಿ ಇರುವ ಲಿಂಕನ್ನು ತೆರೆದು ಅರ್ಜಿಯನ್ನು ಭರ್ತಿಮಾಡಬೇಕು. ನಂತರ ಒಂದು ಪ್ರತಿಯನ್ನು ಪ್ರಿಂಟ್ ತೆಗೆದುಕೊಂಡು, ಅಗತ್ಯ - ಪೂರಕ ದಾಖಲೆಗಳೊಂದಿಗೆ ವಿಳಾಸ - ಅಧ್ಯಕ್ಷರು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.) ಮೂಡುಬಿದಿರೆ, ದಕ್ಷಿಣ ಕನ್ನಡ - 574227 ಇವರಿಗೆ ಸಲ್ಲಿಸುವುದು.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 15-01-2025 ರ ಒಳಗೆ ತಲುಪುವಂತೆ ಕಳುಹಿಸಿಕೊಡಬೇಕು.
ಆಯ್ಕೆ ಪ್ರಕ್ರಿಯೆ ನಡೆಸುವ ದಿನಾಂಕ: 02-03-2025
ಆಯ್ಕೆ ಪ್ರಕ್ರಿಯೆ ನಡೆಸುವ ಸ್ಥಳ: ಆಳ್ವಾಸ್ ಆವರಣ, ವಿದ್ಯಾಗಿರಿ, ಮೂಡುಬಿದಿರೆ, ದಕ್ಷಿಣ ಕನ್ನಡ.
ಅರ್ಜಿ ಇಲ್ಲದೆ ನೇರವಾಗಿ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ಇರುವುದಿಲ್ಲ. ಆಯ್ಕೆ ಪ್ರಕ್ರಿಯೆಯಲ್ಲಿ ಉತ್ತೀರ್ಣರಾದವರಿಗೆ ಮಾತ್ರ ಸಂಪೂರ್ಣ ಉಚಿತ ಶಿಕ್ಷಣ, ವಸತಿ ಸಹಿತ ಊಟೋಪಚಾರ ಸೌಲಭ್ಯ ದೊರೆಯಲಿದೆ
ಅರ್ಜಿಯನ್ನು ಭರ್ತಿ ಮಾಡುವ ಸಂದರ್ಭದಲ್ಲಿ ಅನುಸರಿಸಬೇಕಾದ ಸೂಚನೆಗಳು
ಪ್ರಸ್ತುತ 6, 7, 8, ಮತ್ತು 9ನೇ ತರಗತಿಗಳಿಗೆ ವಿದ್ಯಾರ್ಥಿ ಪ್ರವೇಶಾತಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿಯನ್ನು ಕಡ್ಡಾಯವಾಗಿ ಮತ್ತು ಪೂರ್ಣವಾಗಿ ಭರ್ತಿ ಮಾಡುವುದು. ಅರ್ಜಿ ಇಲ್ಲದೆ ನೇರವಾಗಿ ಪರೀಕ್ಷೆ ಬರೆಯಲು ಯಾರಿಗೂ ಅವಕಾಶ ನೀಡಲಾಗುವುದಿಲ್ಲ. ಪರೀಕ್ಷೆಯು ದಿನಾಂಕ 01 ಮಾರ್ಚ್ 2026 ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಆಳ್ವಾಸ್ ವಿದ್ಯಾಗಿರಿ ಮತ್ತು ಪುತ್ತಿಗೆ ಕ್ಯಾಂಪಸ್‌ನ ವಿವಿಧ ಬ್ಲಾಕ್‌ಗಳಲ್ಲಿ ನಡೆಯಲಿದೆ.
ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಕಡ್ಡಾಯವಾಗಿ ವಿದ್ಯಾರ್ಥಿಯ ಎಸ್.ಎ.ಟಿ.ಎಸ್ (ಶಾಲಾ ಮುಖ್ಯಸ್ಥರಿಂದ ಖಚಿತಪಡಿಸಿಕೊಂಡು) ಹಾಗೂ ಆಧಾರ್ ಸಂಖ್ಯೆಯನ್ನು ನಮೂದಿಸುವುದು, ಅರ್ಜಿಯೊಂದಿಗೆ ವಿದ್ಯಾರ್ಥಿಯ ಇತ್ತೀಚಿನ ಪಾಸ್‌ಪೋರ್ಟ್ (3:4) ಅಳತೆಯ ಭಾವಚಿತ್ರವನ್ನು ನಿಗದಿತ ಸ್ಥಳದಲ್ಲಿ JPEJ (256kb) ಮಾದರಿಯಲ್ಲಿ ಲಗತ್ತಿಸುವುದು. ಆಧಾರ್ ಹಾಗೂ ಇನ್ನಿತರ ಶಾಲೆಗೆ ಸಂಬಂಧಿಸಿದ ಯಾವುದೇ ದಾಖಲೆಗಳನ್ನು ಅರ್ಜಿಯೊಂದಿಗೆ ಕಳುಹಿಸಬೇಕಿಲ್ಲ..
ಒಂದೇ ವಿದ್ಯಾರ್ಥಿಯು ಪದೇ ಪದೇ ಅರ್ಜಿ ಹಾಕಲು / ಅರ್ಜಿಯಲ್ಲಿ ಬದಲಾವಣೆ ಮಾಡಲು ಅವಕಾಶವಿರುವುದಿಲ್ಲ.
4. a) ಕ್ರೀಡಾ ವಿಭಾಗದಲ್ಲಿ ಆಯ್ಕೆ ಬಯಸುವ ವಿದ್ಯಾರ್ಥಿಗಳು ವೈಯಕ್ತಿಕ ಅಥವಾ ಗುಂಪು ಸ್ಪರ್ಧೆಗಳಲ್ಲಿ ಜಿಲ್ಲಾ/ ರಾಜ್ಯ/ ರಾಷ್ಟ್ರ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿರಬೇಕು,
b) ಸಾಂಸ್ಕೃತಿಕ ವಿಭಾಗದಲ್ಲಿ ಆಯ್ಕೆ ಬಯಸುವ ವಿದ್ಯಾರ್ಥಿಗಳು ಶಾಸ್ತ್ರೀಯ (ಸೀನಿಯರ್/ ಜೂನಿಯರ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು) / ಜಾನಪದ / ಯೋಗ / ಮಲ್ಲಕಂಬ ವಿಭಾಗದಲ್ಲಿ ಆಯ್ಕೆ ಬಯಸುವ ವಿದ್ಯಾರ್ಥಿಗಳು ಜಿಲ್ಲಾ / ರಾಜ್ಯ / ರಾಷ್ಟ್ರ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿದ ಪ್ರಮಾಣ ಪತ್ರದೊಂದಿಗೆ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸುವುದು
ಪ್ರಸ್ತುತ ವಿದ್ಯಾರ್ಥಿಗಳು ಯಾವ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೋ, ಅದರ ಮುಂದಿನ ತರಗತಿಗೆ ಆಯ್ಕೆ ಬಯಸುವುದರಿಂದ ಪ್ರಸ್ತುತ ಓದುತ್ತಿರುವ ಎಲ್ಲಾ ವಿಷಯಗಳಲ್ಲಿ ಹಾಗೂ ಮಾನಸಿಕ ಸಾಮರ್ಥ್ಯ ವಿಷಯಗಳನ್ನು ಅಧ್ಯಯನ ಮಾಡಬೇಕು.
6, 7, 8ನೇ ಮತ್ತು 9ನೇ ತರಗತಿಗಳಿಗೆ 2.30 ನಿಮಿಷದ 150 ಅಂಕಗಳ ಓ.ಎಮ್.ಆರ್ ಆಧಾರಿತ ಪ್ರಶ್ನೆ ಪತ್ರಿಕೆ ಇರುತ್ತದೆ. ಪರೀಕ್ಷೆಯು ಪೂರ್ವಾಹ್ನ 10.00 ಗಂಟೆಗೆ ಪ್ರಾರಂಭವಾಗಲಿದ್ದು 12.30ಕ್ಕೆ ಮುಗಿಯಲಿದೆ. ಪರೀಕ್ಷಾ ಕೇಂದ್ರಕ್ಕೆ ಬೆಳಗ್ಗೆ 9.00ರ ಹೊತ್ತಿಗೆ ಹಾಜರಾಗುವುದು.
ಪರೀಕ್ಷಾ ಕೇಂದ್ರದ ಮಾಹಿತಿ ನಿಮ್ಮ ಪ್ರವೇಶಪತ್ರದಲ್ಲಿ ನಮೂದಾಗಿದ್ದು ಅದೇ ಕೇಂದ್ರಕ್ಕೆ ತೆರಳಿ ಪರೀಕ್ಷೆ ಬರೆಯುವುದು. ಪರೀಕ್ಷಾ ಕೇಂದ್ರದ ಬದಲಾವಣೆಗೆ ಅವಕಾಶವಿರುವುದಿಲ್ಲ. ಪರೀಕ್ಷೆ ಬರೆಯಲು ಪ್ರವೇಶಪತ್ರ ಕಡ್ಡಾಯವಾಗಿದೆ.
ಅರ್ಜಿಯನ್ನು ಪೂರ್ಣವಾಗಿ Onlineನಲ್ಲಿ ಭರ್ತಿ ಮಾಡಿ Submit ಆದ ಬಳಿಕ ಎರಡು ಪ್ರತಿಯನ್ನು ಪ್ರಿಂಟ್ ಮಾಡಿಕೊಳ್ಳುವುದು. ನಂತರದಲ್ಲಿ ಒಂದು ಪ್ರತಿ ಅರ್ಜಿಯನ್ನು ಸಂಸ್ಥೆಯ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸುವುದು.
ಮೊದಲ ಹಂತದ ಆಯ್ಕೆ ಪ್ರಕ್ರಿಯೆಯು ಓ. ಎಮ್. ಆರ್ ಮಾದರಿಯಲ್ಲಿ ಇರಲಿದ್ದು, ಎರಡನೇ ಹಂತಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಬರವಣಿಗೆ ಆಧಾರಿತ ಚಟುವಟಿಕೆಯನ್ನು ನಡೆಸಲಾಗಿ ಆಯ್ಕೆ ಪಟ್ಟಿ ಪ್ರಕಟಿಸಲಾಗುತ್ತದೆ. ಮರುದಿನ ನೇರ ಸಂದರ್ಶನದಲ್ಲಿ ಭಾಗವಹಿಸಿ ದಾಖಲಾತಿ ಮಾಡಿಕೊಳ್ಳುವುದು.
ಹೆಚ್ಚಿನ ಮಾಹಿತಿ ಬೇಕಾಗಿದ್ದಲ್ಲಿ ದೂರವಾಣಿ ಮೂಲಕ ಸಂಪರ್ಕಿಸಬಹುದು
(ಸಮಯ 9.00am-5:00pm- +91 70265 30137 / +91 70265 30263)
ಅರ್ಜಿಯನ್ನು ಸಲ್ಲಿಸಲು ಈ ಲಿಂಕ್ ಮೂಲಕ ಸಲ್ಲಿಸಿ..👇👇👇👇👇👇👇👇👇
CLICK HERE TO APPLY THE SCHOLARSHIP....
ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ನಮ್ಮ ದೂರವಾಣಿ ಸಂಖ್ಯೆಗೆ ಸಂಪರ್ಕಿಸಿ....👇👇👇👇👇👇👇👇👇👇👇👇
No comments:
Post a Comment