Hedding : Karnataka government has given a Diwali gift to government employees. Approval for increase in dearness allowance...
ಸರ್ಕಾರಿ ನೌಕರರಿಗೆ ಕರ್ನಾಟಕ ಸರ್ಕಾರ ದೀಪಾವಳಿ ಹಬ್ಬದ ಉಡುಗೊರೆ ನೀಡಿದೆ. ತುಟ್ಟಿಭತ್ಯೆ ಹೆಚ್ಚಳಕ್ಕೆ ಅನುಮೋದನೆ ನೀಡಿದ್ದು, ಈ ಕುರಿತು ಎರಡು ದಿನದಲ್ಲಿ ಆದೇಶ ಪ್ರಕಟವಾಗಲಿದೆ.
ಈ ಕುರಿತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಕಬ್ಬನ್ ಉದ್ಯಾನವನ ಬೆಂಗಳೂರು ಪೋಸ್ಟರ್ ಬಿಡುಗಡೆಯಾಗಿದೆ.
ತುಟ್ಟಿಭತ್ಯೆ 2% ಹೆಚ್ಚಿಸಿ ಅನುಮೋದಿಸಿದಕ್ಕೆ ಧನ್ಯವಾದಗಳು ಎಂಬ ವಿಷಯವನ್ನು ಪೋಸ್ಟರ್ ಒಳಗೊಂಡಿದೆ.
ಸರ್ಕಾರಿ ನೌಕರರಿಗೆ ದಿನಾಂಕ: 01-07-2025ರಿಂದ ಅನ್ವಯವಾಗುವಂತೆ ಶೇ.2.00 ತುಟ್ಟಿಭತ್ಯೆಯನ್ನು ಹೆಚ್ಚಿಸುವ ಕಡತಕ್ಕೆ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯರವರು ಅನುಮೋದನೆ ನೀಡಿರುತ್ತಾರೆ.
ಮುಂದಿನ 2 ರಿಂದ 3 ದಿನಗಳಲ್ಲಿ ಅಧಿಕೃತ ಆದೇಶ ಹೊರಬೀಳಲಿದೆ.
ಧನ್ಯವಾದಗಳು ಸಿ.ಎಸ್. ಷಡಾಕ್ಷರಿ ರಾಜ್ಯಾಧ್ಯಕ್ಷರು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು ಎಂದು ಪೋಸ್ಟರ್‌ನಲ್ಲಿ ತಿಳಿಸಲಾಗಿದೆ.
ಸರ್ಕಾರಕ್ಕೆ ಒತ್ತಾಯ: ಕೇಂದ್ರ ಸರ್ಕಾರ ಡಿಎ ಹೆಚ್ಚಳ
ಮಾಡಿದ ಬಳಿಕ ರಾಜ್ಯ ಸರ್ಕಾರ ಡಿಎ ಏರಿಕೆ ಮಾಡುವುದು ವಾಡಿಕೆಯಾಗಿದೆ. ಈಗಾಗಲೇ ಕೇಂದ್ರ ಸರ್ಕಾರ ದಸರಾ ಸಂದರ್ಭದಲ್ಲಿಯೇ ತನ್ನ ನೌಕರರ ಡಿಎ ಹೆಚ್ಚಳ ಮಾಡಿದೆ. ಆದ್ದರಿಂದ ಕರ್ನಾಟಕ ಸರ್ಕಾರವು ಡಿಎ ಹೆಚ್ಚಳ ಮಾಡಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ರಾಜ್ಯ ಸರ್ಕಾರವನ್ನು ಒತ್ತಾಯಿಸಿತ್ತು.
ರಾಜ್ಯ ಸರ್ಕಾರಿ ನೌಕರರಿಗೆ 2025ರ ಜುಲೈ 1 ರಿಂದ ಅನ್ವಯವಾಗುವಂತೆ ಬಾಕಿ ಇರುವ ತುಟ್ಟಿಭತ್ಯೆಯನ್ನು ನಗದು ರೂಪದಲ್ಲಿ ಬಿಡುಗಡೆ ಮಾಡಬೇಕೆಂದು ಸರ್ಕಾರಿ ನೌಕರರ ಸರ್ಕಾರ ಸಂಘ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಒತ್ತಾಯಿಸಿತ್ತು.
ಅಖಿಲ ಭಾರತ ಬೆಲೆ ಸೂಚ್ಯಂಕ ಆಧರಿಸಿ ಕೇಂದ್ರ ಸರ್ಕಾರವು ತನ್ನ ನೌಕರರಿಗೆ ತುಟ್ಟಿಭತ್ಯೆ ಮಂಜೂರು ಮಾಡಿದ ದಿನಾಂಕದಿಂದಲೇ ರಾಜ್ಯ ಸರ್ಕಾರ ತುಟ್ಟಿ ಭತ್ಯೆ ಮಂಜೂರು ಮಾಡುವುದು ಸಂಪ್ರದಾಯ.
ಆದೇಶಿಸಿದೆ. ಹೀಗಾಗಿ ರಾಜ್ಯ ಸರ್ಕಾರಿ ನೌಕರರಿಗೂ ಶೇ.3 ತುಟ್ಟಿ ಭತ್ಯೆಯನ್ನು ಸಂಪೂರ್ಣ ನಗದು ರೂಪದಲ್ಲಿ ನೀಡಿ ಆದೇಶ ಹೊರಡಿಸಬೇಕೆಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಸರ್ಕಾರವನ್ನು ಆಗ್ರಹಿಸಿದ್ದರು.
ಈ ಕುರಿತು ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಆರ್ಥಿಕ ಇಲಾಖೆ, ಕರ್ನಾಟಕ ಸರ್ಕಾರ, ವಿಧಾನಸೌಧ, ಬೆಂಗಳೂರು ಇವರಿಗೆ ಪತ್ರವನ್ನು ಸಹ ಬರೆಯಲಾಗಿತ್ತು.
ಈ ಪತ್ರ ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ದಿ:01-07-2025ರಿಂದ ಅನ್ವಯವಾಗುವಂತೆ ಬಾಕಿ ಇರುವ ತುಟ್ಟಿಭತ್ಯೆಯನ್ನು ನಗದು ರೂಪದಲ್ಲಿ ಬಿಡುಗಡೆ ಮಾಡುವ ಬಗ್ಗೆ ಎಂಬ ವಿಷಯವನ್ನು ಒಳಗೊಂಡಿತ್ತು. ಕೇಂದ್ರ ಸರ್ಕಾರದ ಡಿಎ ಹೆಚ್ಚಳದ ಆದೇಶವನ್ನು ಉಲ್ಲೇಖಿಸಲಾಗಿತ್ತು.
ಸೂಚಿತ ವಿಷಯದನ್ವಯ ಅಖಿಲ ಭಾರತ ಬೆಲೆ ಸೂಚ್ಯಾಂಕವನ್ನಾಧರಿಸಿ ಕೇಂದ್ರ ಸರ್ಕಾರವು ತನ್ನ ನೌಕರರಿಗೆ ತುಟ್ಟಿಭತ್ಯೆಯನ್ನು ಮಂಜೂರು ಮಾಡಿದ ದಿನಾಂಕದಿಂದಲೇ ಕರ್ನಾಟಕ ರಾಜ್ಯ ಸರ್ಕಾರವು ಸಹ ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು ಮಂಜೂರು ಮಾಡುವರುಷದಾಯವಾಗಿರುತ್ತದೆ.
ಮಂಜೂರು ಮಾಡುವುದು ಸಂಪ್ರದಾಯವಾಗಿರುತ್ತದೆ.
ಪ್ರಸ್ತುತ ಕೇಂದ್ರ ಸರ್ಕಾರವು ಅಖಿಲ ಭಾರತ ಬೆಲೆ ಸೂಚ್ಯಾಂಕವನ್ನಾಧರಿಸಿ ಉಲ್ಲೇಖಿತ ಆದೇಶದಲ್ಲಿ ದಿನಾಂಕ: 01-07-2025ರಿಂದ ಅನ್ವಯವಾಗುವಂತೆ ಕೇಂದ್ರ ಸರ್ಕಾರಿ ನೌಕರರಿಗೆ ಶೇ. 3%ರಷ್ಟು ತುಟ್ಟಿಭತ್ಯೆಯನ್ನು ಮಂಜೂರು ಮಾಡಿ ಆದೇಶಿಸಿದೆ.
ಆದ್ದರಿಂದ, ಕರ್ನಾಟಕ ರಾಜ್ಯದ ಸರ್ಕಾರಿ ನೌಕರರಿಗೂ ದಿನಾಂಕ: 01-07-2025 ರಿಂದ ಅನ್ವಯವಾಗುವಂತೆ ಶೇ. 3%ರಷ್ಟು ತುಟ್ಟಿಭತ್ಯೆಯನ್ನು ಸಂಪೂರ್ಣ ನಗದು ರೂಪದಲ್ಲಿ ನೀಡಿ ಆದೇಶ ಹೊರಡಿಸಲು ತಮ್ಮಲ್ಲಿ ಕೋರಿದೆ ಎಂದು ಸಿ.ಎಸ್.ಪಡಾಕ್ಷರಿ ಪತ್ರದಲ್ಲಿ ಮನವಿ ಮಾಡಿದ್ದರು.
👇👇👇👇👇👇👇👇👇👇👇👇👇👇👇👇👇👇👇👇👇👇👇👇👇👇👇👇👇👇👇👇👇👇
ಸರ್ಕಾರಿ ನೌಕರರಿಗೆ ಕರ್ನಾಟಕ ಸರ್ಕಾರ ದೀಪಾವಳಿ ಹಬ್ಬದ ಉಡುಗೊರೆ ನೀಡಿದೆ. ತುಟ್ಟಿಭತ್ಯೆ ಹೆಚ್ಚಳಕ್ಕೆ ಅನುಮೋದನೆ...
CLICK HERE TO VIEW THE INFORMATION ℹ️ℹ️ℹ️...
No comments:
Post a Comment