Sunday, October 12, 2025

Regarding direct recruitment to various vacant posts in the residual basic cadre in Government Institutions/Corporations/Institutions...

  KSPSTA       Sunday, October 12, 2025

 Hedding : Regarding direct recruitment to various vacant posts in the residual basic cadre in Government Institutions/Corporations/Institutions...

ಸರ್ಕಾರಿ ಸಂಸ್ಥೆ/ನಿಗಮ/ಸಂಸ್ಥೆಗಳಲ್ಲಿ ಉಳಿಕೆ ಮೂಲ ವೃಂದದಲ್ಲಿರುವ ಖಾಲಿ ಇರುವ ವಿವಿಧ ವೃಂದದ ಹುದ್ದೆಗಳಿಗೆ ನೇರ ನೇಮಕಾತಿ ಮಾಡುವ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳ ನೇಮಕಾತಿಗೆ ಅರ್ಹತೆ ಪಡೆಯಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗಬೇಕು.


Jnyanabhandar

ಸ್ಪರ್ಧಾತ್ಮಕ ಪರೀಕ್ಷಾ ವಿಧಾನ:


ಮೇಲ್ಕಂಡ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ಆಫ್‌ಲೈನ್-ಒಎಂಆರ್ ಮಾದರಿ (Offline-OMR type) ಯಲ್ಲಿ


ಮೂಲಕ ನಡೆಸಲಾಗುವುದು.


ಸ್ಪರ್ಧಾತ್ಮಕ ಪರೀಕ್ಷೆಗಳನ್ನು: ಬೆಂಗಳೂರು, ಮೈಸೂರು, ದಾವಣಗೆರೆ, ದಕ್ಷಿಣ ಕನ್ನಡ, ಶಿವಮೊಗ್ಗ, ಬೆಳಗಾವಿ, ಧಾರವಾಡ,


ಬಳ್ಳಾರಿ, ಕೊಪ್ಪಳ, ವಿಜಯಪುರ, ತುಮಕೂರು ಮತ್ತು ಕಲಬುರ್ಗಿ ಕೇಂದ್ರಗಳಲ್ಲಿ ನಡೆಸಲಾಗುವುದು. (ಆಡಳಿತಾತ್ಮಕ ಉದ್ದೇಶದಿಂದ ಜಿಲ್ಲಾ ಪರೀಕ್ಷಾ ಕೇಂದ್ರಗಳು ಬದಲಾವಣೆಯ ಷರತ್ತಿಗೆ ಒಳಪಟ್ಟಿರುತ್ತದೆ) ಅಭ್ಯರ್ಥಿಗಳಿಗೆ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಪ್ರಾಧಿಕಾರದ ವೆಬ್‌ಸೈಟ್‌ನಿಂದ ಡೌನ್ ಲೋಡ್ ಮಾಡಿಕೊಳ್ಳಲು ಪ್ರಕಟಣೆಯ ಮೂಲಕ ತಿಳಿಸಲಾಗುವುದು ಹಾಗೂ ಈ ಬಗ್ಗೆ ಮಾಹಿತಿಯನ್ನು ಪ್ರಾಧಿಕಾರದ ವೆಬ್‌ಸೈಟ್‌ ನಲ್ಲಿಯೂ ಪ್ರಕಟಿಸಲಾಗುವುದು, ಅಭ್ಯರ್ಥಿಗಳು ಕಡ್ಡಾಯವಾಗಿ ಪ್ರವೇಶ ಪತ್ರಗಳನ್ನು ಡೌನ್ ಲೋಡ್ ಮಾಡಿಕೊಂಡು ಒಂದು ಮೂಲ ಗುರುತಿನ ಚೀಟಿಯೊಂದಿಗೆ (ಪ್ಯಾನ್ ಕಾರ್ಡ್ /ವಾಹನ ಚಾಲನಾ ಪರವಾನಗಿ / ಆಧಾರ್ ಕಾರ್ಡ್ / ಪಾಸ್ಪೋರ್ಟ್ ವೋಟರ್ ಐಡಿ/ ಸರ್ಕಾರಿ ನೌಕರರ ಐಡಿ) ಪರೀಕ್ಷಾ ಕೇಂದ್ರಗಳಿಗೆ ಹೋಗಬೇಕು, ತಪ್ಪಿದ್ದಲ್ಲಿ ಪರೀಕ್ಷಾ ಕೇಂದ್ರವನ್ನು ಪ್ರವೇಶಿಸಲು ಅನುಮತಿಸಲಾಗುವುದಿಲ್ಲ.


೩. ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ:


ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ವ್ಯಾಸಂಗ ಮಾಡಿದ್ದಲ್ಲಿ ಅಥವಾ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅಥವಾ ಕರ್ನಾಟಕ ಲೋಕಸೇವಾ ಆಯೋಗದಿಂದ ನಡೆಸಲಾದ ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ಉತ್ತೀರ್ಣರಾದಲ್ಲಿ ಕಡ್ಡಾಯ ಕನ್ನಡ ಪರೀಕ್ಷೆಯಿಂದ ವಿನಾಯತಿ ನೀಡಲಾಗುತ್ತದೆ. ಉಳಿದ ಅಭ್ಯರ್ಥಿಗಳಿಗೆ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯು ಬಹು ಆಯ್ಕೆ ಮಾದರಿ ಪತ್ರಿಕೆಯಾಗಿದ್ದು, ಗರಿಷ್ಠ 150 ಅಂಕಗಳನ್ನು ಒಳಗೊಂಡಿರುತ್ತದೆ ಮತ್ತು ಅಭ್ಯರ್ಥಿಗಳು ಇದರಲ್ಲಿ ಅರ್ಹತೆ ಗಳಿಸಲು ಕನಿಷ್ಠ 50 ಅಂಕಗಳನ್ನು ಗಳಿಸತಕ್ಕದ್ದು, ಗೈರು ಹಾಜರಾದ / ಕನಿಷ್ಠ 50 ಅಂಶಗಳನ್ನು ಗಳಿಸದ ಅಭ್ಯರ್ಥಿಗಳು ಆಯ್ಕೆಗೆ ಅರ್ಹರಾಗುವುದಿಲ್ಲ. ಈ ಪ್ರಶ್ನೆಪತ್ರಿಕೆಯನ್ನು ಎಸ್.ಎಸ್.ಎಲ್.ಸಿ ಹಂತದಲ್ಲಿನ ಪ್ರಥಮ ಭಾಷೆ ಕನ್ನಡವನ್ನು ಮಾನದಂಡ ವನ್ನಾಗಿಟ್ಟಿಕೊಂಡು ಸಿದ್ಧಪಡಿಸಲಾಗುವುದು. ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ದ್ವೇಷ್ಠತೆಗೆ ಅಥವಾ ಹುದ್ದೆಗಳ ಆಯ್ಕೆಗೆ ಪರಿಗಣಿಸುವುದಿಲ್ಲ.


(ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಹುದ್ದೆಗಳಿಗೆ ಮಾತ್ರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಕಡ್ಡಾಯ ಕನ್ನಡ ಪರೀಕ್ಷೆಗೆ ಹಾಜರಾಗುವಂತಿಲ್ಲ)


(ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ ಸಂಬಂಧಿಸಿದಂತೆ)


ಕನ್ನಡ ಭಾಷಾಜ್ಞಾನ: ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ವ್ಯಾಸಂಗ ಮಾಡಿದ್ದಲ್ಲಿ ಮಾತ್ರ ಅಭ್ಯರ್ಥಿಗಳು ನೇಮಕಾತಿಗೆ ಅರ್ಹರಾಗುತ್ತಾರೆ. ಇಲ್ಲವಾದಲ್ಲಿ ಜಾರಿಯಲ್ಲಿರುವ ನಿಯಮಾವಳಿಯಂತೆ ಸಂಸ್ಥೆಯು ನಡೆಸುವ ಕನ್ನಡ ಭಾಷಾ ಪರೀಕ್ಷೆಯಲ್ಲಿ ಒಂದೇ ಅವಕಾಶದಲ್ಲಿ ಉತ್ತೀರ್ಣರಾಗಬೇಕು. ಇಲ್ಲದಿದ್ದಲ್ಲಿ ಅವರ ಆಯ್ಕೆಯನ್ನು ರದ್ದುಗೊಳಿಸಲಾಗುವುದು.















CLICKHERE TO DOWNLOAD THE PDF FILE 🗄️🗃️🗃️🗃️...

logoblog

Thanks for reading Regarding direct recruitment to various vacant posts in the residual basic cadre in Government Institutions/Corporations/Institutions...

Previous
« Prev Post

No comments:

Post a Comment